ಎಸಿಬಿಯಿಂದ ದೂರು ಸ್ವೀಕಾರ

ಮಂಗಳೂರು ಏಪ್ರಿಲ್ 25 (ನ್ಯೂಸ್ ಕಡಬ) newskadaba.com,):-ದಕ್ಷಿಣ ಕನ್ನಡ ಜಿಲ್ಲೆಯ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಏಪ್ರಿಲ್ 27 ರಂದು ಪೂರ್ವಾಹ್ನ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯ ವರೆಗೆ ಪುತ್ತೂರು ಮತ್ತು ಮೂಡಬಿದ್ರೆ ಸರ್ಕಾರಿ ಪ್ರವಾಸಿ ಮಂದಿರಗಳಲ್ಲಿ ಮತ್ತು ಏಪ್ರಿಲ್ 30 ರಂದು ಪೂರ್ವಾಹ್ನ 11 ಗಂಟೆಯಿಂದ ಮದ್ಯಾಹ್ನ 1 ಗಂಟೆಯವರೆಗೆ ಬೆಳ್ತಂಗಡಿ ಸರ್ಕಾರಿ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ಭ್ರಷ್ಟಾಚಾರಕ್ಕೆ ಸಂಬಂಧಪಟ್ಟ ದೂರುಗಳನ್ನು ಸ್ವೀಕರಿಸಲಿದ್ದಾರೆ ಎಂದು ಪೊಲೀಸ್ ಉಪಾಧೀಕ್ಷಕರು, ಎಸಿಬಿ, ದ.ಕಜಿಲ್ಲೆ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Also Read  ಬೆಳ್ಳಾರೆ: ಅಪ್ರಾಪ್ತ ಬಾಲಕಿಯ ಅತ್ಯಾಚಾರ ➤ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು

error: Content is protected !!
Scroll to Top