ನಾಳೆ (ಮೇ.04) ಕಡಬ ಸರಕಾರಿ ಆಸ್ಪತ್ರೆಯಲ್ಲಿ ‘ಸ್ಪೆಶಾಲಿಟಿ ಕ್ಲಿನಿಕ್’ ವಿಶೇಷ ವೈದ್ಯಕೀಯ ಶಿಬಿರ ➤ ಮೆಡಿಸಿನ್‌ ತಜ್ಞರು, ಶಸ್ತ್ರಚಿಕಿತ್ಸಾ ತಜ್ಞರು, ಚರ್ಮರೋಗ ತಜ್ಞರಿಂದ ಸಾರ್ವಜನಿಕ ಸೇವೆ

(ನ್ಯೂಸ್ ಕಡಬ) newskadaba.com ಕಡಬ, ಮೇ.03. ಕರ್ನಾಟಕ ಸರಕಾರಿ ವೈದ್ಯರ ಸಂಘದ ಆಶ್ರಯದಲ್ಲಿ ‘ಸ್ಪೆಶಾಲಿಟಿ ಕ್ಲಿನಿಕ್’ ವೈದ್ಯಕೀಯ ಶಿಬಿರವು ಶನಿವಾರದಂದು ಕಡಬ ಸಮುದಾಯ ಆಸ್ಪತ್ರೆಯಲ್ಲಿ ನಡೆಯಲಿದೆ.

ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ ಮೆಡಿಸಿನ್ ತಜ್ಞರು, ಶಸ್ತ್ರಚಿಕಿತ್ಸಾ ತಜ್ಞರು, ಚರ್ಮರೋಗ ತಜ್ಞರು ಈ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದು, ಶನಿವಾರ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಈ ವೈದ್ಯಕೀಯ ಶಿಬಿರ ನಡೆಯಲಿದೆ. ಸಾರ್ವಜನಿಕರು ಈ ಶಿಬಿರದ ಪ್ರಯೋಜನವನ್ನು ಪಡೆಯಬೇಕೆಂದು ವೈದ್ಯಾಧಿಕಾರಿ ಡಾ| ಸುಚಿತ್ರಾ ರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Scroll to Top