ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಂದ ಪ್ರತಿಷ್ಠಿತ ಶಾಲೆಗಳಿಗೆ ಸೇರಲು ಅರ್ಜಿ ಆಹ್ವಾನ

ಮಂಗಳೂರು ಮೇ 3( ನ್ಯೂಸ್ ಕಡಬ) newskadaba.com,) :- ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತಿಭಾವಂತ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳನ್ನು ಪ್ರತಿಷ್ಠಿತ ಶಾಲೆಗಳಿಗೆ 6ನೇ ಅಥವಾ ನಂತರದ ತರಗತಿಗಳಿಗೆ ದಾಖಲಿಸಲು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಮೇ 18.ಸೇರ್ಪಡೆಗೊಳಿಸುವ ಪ್ರತಿಷ್ಟಿತ ಶಾಲಾ ವಿವರ ಇಂತಿವೆ: ಶಾರದಾ ವಿದ್ಯಾಲಯ, ಕೊಡಿಯಾಲ್‍ಬೈಲ್, ಮಂಗಳೂರು ಶಾರದಾ ಗಣಪತಿ ವಿದ್ಯಾಕೇಂದ್ರ, ಪುಣ್ಯಕೋಟಿ ನಗರ, ಕೈರಂಗಳ ಅಂಚೆ, ಬಂಟ್ವಾಳ ತಾಲೂಕು, ಬಾಲವಿಕಾಸ, ಆಂಗ್ಲ ಮಾಧ್ಯಮ ಶಾಲೆ, ಮಾಣಿ, ಬಂಟ್ವಾಳ ತಾಲೂಕು, ವಿಟ್ಲ ಜೆಸಿಸ್ ಆಂಗ್ಲ ಮಾಧ್ಯಮ ಶಾಲೆ, ಬಸವನ ಗುಡಿ, ವಿಟ್ಲ. ಬಂಟ್ವಾಳ ತಾಲೂಕು, ಎಸ್.ವಿ.ಎಸ್. ಆಂಗ್ಲ ಮಾಧ್ಯಮ ಶಾಲೆ, ವಿದ್ಯಾಗಿರಿ, ಬಂಟ್ವಾಳ ತಾಲೂಕು, ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆ, ಉಜಿರೆ, ಬೆಳ್ತಂಗಡಿ ತಾಲೂಕು. ವಾಣಿ ಇಂಗ್ಲೀಷ್ ಆಂಗ್ಲ ಮಾಧ್ಯಮ ಶಾಲೆ, ಹಳೆಕೋಟೆ, ಬೆಳ್ತಂಗಡಿ ತಾಲೂಕು. ಸೆಕ್ರೇಡ್ ಹಾಟ್ಸ್ ಪದವಿ ಪೂರ್ವ ಕಾಲೇಜು ಪ್ರೌಢ ಶಾಲಾ ವಿಭಾಗ, ಮಡಂತ್ಯಾರು, ಬೆಳ್ತಂಗಡಿ.ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆ ಮತ್ತು ಷರತ್ತು: ಪರಿಶಿಷ್ಟ ವರ್ಗಕ್ಕೆ ಸೇರಿರಬೇಕು. (ಜಾತಿ ಪ್ರಮಾಣ ಪತ್ರ ಲಗತ್ತಿಸಬೇಕು). ಅಭ್ಯರ್ಥಿಯ ಕುಟುಂಬದ ವಾರ್ಷಿಕ ಆದಾಯವು ರೂ. 2 ಲಕ್ಷಗಳಿಗೆ ಮೀರಿರಬಾರದು. (2018-19ನೇ ಸಾಲಿನ ಆದಾಯ ಪ್ರಮಾಣ ಪತ್ರ ಲಗತ್ತೀಕರಿಸಬೇಕು), ಜನನ ಪ್ರಮಾಣ ಪತ್ರವನ್ನು ಲಗ್ತೀಕರಿಸುವುದು. 2 ಪಾಸಪೋರ್ಟ್ ಸೈಜ್ ಭಾವಚಿತ್ರ ಹಾಗೂ ಪ್ರತಿಭಾವಂತ ವಿದ್ಯಾರ್ಥಿಯಾಗಿರಬೇಕು. ವಿದ್ಯಾರ್ಥಿಯು 5ನೇ ತರಗತಿಯಲ್ಲಿ ಶೇ. 60% ಅಂಕ ಪಡೆದಿರಬೇಕು. ವಿದ್ಯಾರ್ಥಿಯು ಹಿಂದಿನ ತರಗತಿಯಲ್ಲಿ ಉತ್ತೀರ್ಣರಾಗಿರುವ ಅಂಕಪಟ್ಟಿಯ ಜೆರಾಕ್ಸ್ ಪ್ರತಿಯನ್ನು ಲಗ್ತೀಕರಿಸಬೇಕು. ವರ್ಗಾವಣೆ ಪ್ರಮಾಣ ಪತ್ರ (ಟಿ.ಸಿ) ನೀಡಬೇಕು. ದಕ್ಷಿಣ ಕನ್ನಡ ಜಿಲ್ಲೆಯವರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು. ಒಂದು ಕುಟುಂಬದಲ್ಲಿ ಎರಡು ಮಕ್ಕಳಿಗೆ ಮಾತ್ರ ಅಂದರೆ, ಒಬ್ಬ ಬಾಲಕ ಮತ್ತು ಒಬ್ಬ ಬಾಲಕಿಗೆ ಅವಕಾಶ ಕಲ್ಪಿಸಲಾಗುವುದು. ಬಾಲಕ ಇಲ್ಲದಿದ್ದಲ್ಲಿ ಇಬ್ಬರು ಬಾಲಕಿಯರಿಗೆ ಅವಕಾಶ ನೀಡಲಾಗುವುದು. ಗರಿಷ್ಠ ರೂ. 75,000/- ಶಾಲಾ ಶುಲ್ಕವನ್ನು ಸರಕಾರದಿಂದ ಭರಿಸಲಿದೆ. (ಶಾಲೆಯ ಕಡ್ಡಾಯ ಶುಲ್ಕ, ಸಮವಸ್ತ್ರ, ಪಠ್ಯಪುಸ್ತಕ, ಪ್ರವಾಸ ಭತ್ಯೆ ಮತ್ತು ಇತರ ಭತ್ಯೆಗಳನ್ನು ಒಳಗೊಂಡಿರುತ್ತದೆ) ವಿದ್ಯಾರ್ಥಿಯ ಬ್ಯಾಂಕ್ ಪಾಸ್‍ಪುಸ್ತಕದ ಜೆರಾಕ್ಸ್ ಪ್ರತಿ. ಅಪೂರ್ಣ ಅರ್ಜಿ, ತಡವಾಗಿ ಬಂದ ಅರ್ಜಿ ಹಾಗೂ ನಿಬಂಧನೆಗಳನ್ನು ಪೂರೈಸದ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಸುಳ್ಳು ಮಾಹಿತಿ ಹಾಗೂ ಸುಳ್ಳು ಪ್ರಮಾಣ ಪತ್ರಗಳನ್ನು ನೀಡಿದ ಪೋಷಕರ ವಿರುದ್ಧ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವುದು. ಅರ್ಜಿಗಳನ್ನು ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿ ಆಯಾಯ ತಾಲೂಕುಗಳ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಇಲ್ಲಿಗೆ ಸಲ್ಲಿಸುವುದು. ನಿಗದಿಪಡಿಸಿದ ಅರ್ಜಿಗಳನ್ನು ಕಛೇರಿ ವೇಳೆಯಲ್ಲಿ ಆಯಾಯ ಸಹಾಯಕ ನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ ಇಲ್ಲಿಂದ ಪಡೆಯಬಹುದಾಗಿದೆ.
ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆಯವರು ಅರ್ಜಿಗಳನ್ನು ಪರಿಶೀಲನೆ ಮಾಡಿದ ಬಳಿಕ ಯೋಜನಾ ಸಮನ್ವಯಾಧಿಕಾರಿ, ಐ.ಟಿ.ಡಿ.ಪಿ. ಕಚೇರಿ, ಅಶೋಕನಗರ ಅಂಚೆ, ಮಂಗಳೂರು-575006 ಇಲ್ಲಿಗೆ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗಾಗಿ ಯೋಜನಾ ಸಮನ್ವಯಾಧಿಕಾರಿ, ಐ.ಟಿ.ಡಿ.ಪಿ. ಕಚೇರಿ, ಅಶೋಕನಗರ ಅಂಚೆ, ಮಂಗಳೂರು-575006, ದೂರವಾಣಿ ಸಂಖ್ಯೆ 0824-2451269 ಸಂಪರ್ಕಿಸಲು ಯೋಜನಾ ಸಮನ್ವಯಾಧಿಕಾರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ದಕ್ಷಿಣ ಕನ್ನಡ ಜಿಲ್ಲೆ ಇವರ ಪ್ರಕಟಣೆ ತಿಳಿಸಿದೆ.

Also Read  ಎನ್ಐಟಿಕೆ ಟೋಲ್ ಗೇಟ್ ನಲ್ಲಿ ಟೋಲ್ ಸಂಗ್ರಹ ಸ್ಥಗಿತ ➤ ಪಟಾಕಿ ಸಿಡಿಸಿ ಸಂಭ್ರಮಾಚರಿಸಿದ ಹೋರಾಟ ಸಮಿತಿ

error: Content is protected !!
Scroll to Top