ಮೊರಾರ್ಜಿ ವಸತಿ ಶಾಲೆಗಳ ಪ್ರವೇಶಾತಿ ಕೌನ್ಸಿಲಿಂಗ್

ಮಂಗಳೂರು ಮೇ 3( ನ್ಯೂಸ್ ಕಡಬ) newskadaba.com,) :- ದಕ್ಷಿಣ ಕನ್ನಡ ಜಿಲ್ಲೆಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಂಗಳೂರು ತಾಲೂಕಿನ ಕಮ್ಮಾಜೆ, ಕಲ್ಲಬೆಟ್ಟು, ಗುರುಪುರ, ನೀರುಮಾರ್ಗ ಬೆಳ್ತಂಗಡಿ ತಾಲೂಕಿನ ಮಚ್ಚಿನ, ಮುಂಡಾಜೆ, ಹೊಸಂಗಡಿ ಬಂಟ್ವಾಳ ತಾಲೂಕಿನ ವಗ್ಗ, ಪುತ್ತೂರು ತಾಲೂಕಿನ ಬಲ್ನಾಡು, ಉಪ್ಪಿನಂಗಡಿ ಹಾಗೂ ಸುಳ್ಯ ತಾಲೂಕಿನ ಪಂಜ ಮೊರಾರ್ಜಿ ದೇಸಾಯಿ/ಡಾ.ಬಿ.ಆರ್.ಅಂಬೇಡ್ಕರ್/ಇಂದಿರಾ ಗಾಂಧಿ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕಾಗಿ ಜಿಲ್ಲಾ ಮಟ್ಟದ ಕೌನ್ಸಿಲಿಂಗ್ ಪ್ರಕ್ರಿಯೆ ಮೇ 8 ರಂದು ಪೂರ್ವಾಹ್ನ 8.30 ರಿಂದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ನಡೆಯಲಿದೆ. ಆಯ್ಕೆಯಾಗಿರುವ ಅಭ್ಯರ್ಥಿಗಳು ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹಾಗೂ ಇತರೆ ಸೂಕ್ತ ದಾಖಲೆಗಳೊಂದಿಗೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0824-2451237 ಸಂಪರ್ಕಿಸಬಹುದು ಎಂದು ಉಪ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಹಾಗೂ ಸದಸ್ಯ ಕಾರ್ಯದರ್ಶಿ ಜಿಲ್ಲಾ ಮಟ್ಟದ ಪ್ರವೇಶ ಪರೀಕ್ಷಾ ಸಮಿತಿ ದ.ಕ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Also Read  ಅಪ್ರಾಪ್ತ ಬಾಲಕನಿಂದ ಕಾರು ಚಾಲನೆ - ಮಹಿಳೆಗೆ ಢಿಕ್ಕಿ

error: Content is protected !!
Scroll to Top