ಮಂಗಳೂರು ಮೇ 04( ನ್ಯೂಸ್ ಕಡಬ) newskadaba.com,) ;- ವಿಶ್ವ ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ದಕ್ಷಿಣ ಕನ್ನಡ ಜಿಲ್ಲಾ ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಕಾಡ್ಲೂರು ಸತ್ಯನಾರಾಯಣಾಚಾರ್ಯ ಇವರು ಅಧಿಕಾರಿಗಳಿಗೆ ಸಲಹೆ ಮಾಡಿದರು. ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳನ್ನುದ್ದೇಶಿಸಿ ಮಾತನಾಡಿದ ಅವರು, ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರುವುದು ಎಲ್ಲರ ಜವಾಬ್ದಾರಿ ಎಂದರು. ಪರಿಸರ ಸಂರಕ್ಷಣೆಯ ಪ್ರಾಮುಖ್ಯತೆಯನ್ನು ಯುವಸಮುದಾಯಕ್ಕೆ ತಿಳಿಸುವುದರ ಜೊತೆಯಲ್ಲಿ ಒಂದು ಲಕ್ಷಕ್ಕೂ ಅಧಿಕ ಗಿಡ ನೆಡಲು ಸ್ಥಳ ಗುರುತಿಸಿ ಆಸಕ್ತರ ತಂಡ ರಚಿಸಿ ಕಾರ್ಯೋನ್ಮುಖವಾಗಲು ಸಲಹೆಯನ್ನು ನೀಡಿದರು. ಇದಕ್ಕಾಗಿ ವಕೀಲರ ತಂಡ ಸದಾ ಮುಂಚೂಣಿಯಲ್ಲಿದ್ದು ನೆರವು ನೀಡುವ ಭರವಸೆಯನ್ನು ಅವರು ನೀಡಿದರು. ಕಾನೂನು ವಿದ್ಯಾರ್ಥಿಗಳು ಈ ನಿಟ್ಟಿನಲ್ಲಿ ಕೈ ಜೋಡಿಸಬೇಕೆಂದು ಹೇಳಿದರು. ಅಪರ ಜಿಲ್ಲಾಧಿಕಾರಿ ವೆಂಕಟಾಚಲಪತಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ವಿಕ್ರಂ ಅಮಟೆ, ಡಿಡಿಪಿಐ ಶಿವರಾಮಯ್ಯ, ಸಮಾಜಿಕ ಅರಣ್ಯ ವಿಭಾಗದ ಅಧಿಕಾರಿಗಳು, ಪರಿಸರ ಇಲಾಖೆಯ ಅಧಿಕಾರಿಗಳು, ವಕೀಲರ ಸಂಘದ ಅಧ್ಯಕ್ಷರು, ಕಾರ್ಯದರ್ಶಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ವಿಶ್ವ ಪರಿಸರ ದಿನಾಚರಣೆ ಪೂರ್ವಭಾವಿ ಸಭೆ
