ಮಂಗಳೂರು ಮೇ 6( ನ್ಯೂಸ್ ಕಡಬ) newskadaba.com,) :- ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ಪುರಸಭೆ, ಸುಳ್ಯ ಹಾಗೂ ಮುಲ್ಕಿ ಪಟ್ಟಣ ಪಂಚಾಯತ್‍ಗಳಿಗೆ ಸಾರ್ವತ್ರಿಕ ಚುನಾವಣೆ ನಡೆಯಲಿದೆ. ಚುನಾವಣೆ ನಡೆಯುವ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಚುನಾವಣಾ ನೀತಿ ಸಂಹಿತೆಯು 31 ರವರೆಗೆ ಜಾರಿಯಲ್ಲಿರುತ್ತದೆ.ಮೇ 9 ರಂದು ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆಯನ್ನು ಹೊರಡಿಸಲಿದ್ದಾರೆ, ನಾಮಪತ್ರ ಸಲ್ಲಿಸಲು ಕೊನೆಯ ದಿನ ಮೇ 16, ನಾಮಪತ್ರ ಪರಿಶೀಲಿಸುವ ದಿನಾಂಕ ಮೇ 17, ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನಾಂಕ ಮೇ 20, ಮತದಾನ ಅವಶ್ಯವಿದ್ದರೆ ಮತದಾನವನ್ನು ನಡೆಸಬೇಕಾದ ದಿನಾಂಕ ಮೇ 29 ರಂದು ಪೂರ್ವಾಹ್ನ 7 ರಿಂದ ಸಂಜೆ 5 ಗಂಟೆಯವರೆಗೆ, ಮರು ಮತದಾನ ಅವಶ್ಯವಿದ್ದರೆ ಮತದಾನವನ್ನು ನಡೆಸಬೇಕಾದ ದಿನಾಂಕ ಮೇ 30 ರಂದು ಪೂರ್ವಾಹ್ನ 7 ರಿಂದ ಸಂಜೆ 5 ಗಂಟೆಯವರೆಗೆ, ಮತಗಳ ಎಣಿಕೆ ಮೇ 31 ರಂದು ಪೂರ್ವಾಹ್ನ 8 ಗಂಟೆಯಿಂದ ತಾಲೂಕು ಕೇಂದ್ರಗಳಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.