ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿ ಜೀಪು ಪಲ್ಟಿ ➤ ಬಾಲಕ ಮೃತ್ಯು, ಹಲವರಿಗೆ ಗಾಯ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಮೇ.08. ಚಾಲಕನ ನಿಯಂತ್ರಣ ತಪ್ಪಿದ ಜೀಪೊಂದು ಪಲ್ಟಿಯಾದ ಪರಿಣಾಮ ಬಾಲಕನೋರ್ವ ಮೃತಪಟ್ಟು, ಹಲವರು ಗಾಯಗೊಂಡ ಘಟನೆ ಮಂಗಳವಾರ ರಾತ್ರಿ ನೆಲ್ಯಾಡಿಯಲ್ಲಿ ಸಂಭವಿಸಿದೆ.

ಮೃತ ಬಾಲಕನನ್ನು ನೆಲ್ಯಾಡಿ ಅತ್ರಿಜಾಲು ನಿವಾಸಿ ಸುಂದರ ಗೌಡ ಎಂಬವರ ಪುತ್ರ ಪಡುಬೆಟ್ಟು ಶಾಲೆಯ 7ನೇ ತರಗತಿ ವಿದ್ಯಾರ್ಥಿ ಸುಶ್ಮಿತ್(13) ಎಂದು ಗುರುತಿಸಲಾಗಿದೆ. ಉಪ್ಪಿನಂಗಡಿಯಲ್ಲಿ ನಡೆದ ಕಾರ್ಯಕ್ರಮವೊಂದನ್ನು ಮುಗಿಸಿಕೊಂಡು ನೆಲ್ಯಾಡಿ ಕಡೆಗೆ ಹಿಂತಿರುಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಗಾಯಗೊಂಡ ಗಾಯಾಳುಗಳನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Scroll to Top