ಕೆಂಜಾಳ: ಅರಣ್ಯ ಇಲಾಖೆಯ ವಸತಿ ಗೃಹಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾದ ಕಾರು ➤ ಸಿನಿಮೀಯ ಶೈಲಿಯಲ್ಲಿ ಕಾರಿನಲ್ಲಿದ್ದವರು ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಕಡಬ, ಮೇ.08. ರಸ್ತೆಯಲ್ಲಿ ಅಡ್ಡ ಬಂದ ನಾಯಿಯನ್ನು ಬದುಕಿಸುವ ಸಲುವಾಗಿ ಬ್ರೇಕ್ ಹಾಕಿದಾಗ ನಿಯಂತ್ರಣ ತಪ್ಪಿದ ರೆನಾಲ್ಟ್‌ ಡಸ್ಟರ್ ಕಾರೊಂದು ಅರಣ್ಯ ಇಲಾಖೆಯ ವಸತಿ ಗೃಹದ ಕಟ್ಟಡಕ್ಕೆ ಢಿಕ್ಕಿ ಹೊಡೆದು ಮಗುಚಿ ಬಿದ್ದ ಘಟನೆ ಕೊಂಬಾರು ಗ್ರಾಮದ ಕೆಂಜಾಲದಲ್ಲಿ ಬುಧವಾರದಂದು ನಡೆದಿದೆ.

ಬೆಂಗಳೂರಿನಿಂದ ಕುಕ್ಕೇ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಡಸ್ಟರ್ ಕಾರಿಗೆ ಕೆಂಜಾಳ ಸಮೀಪ ನಾಯಿಯೊಂದು ಅಡ್ಡ ಬಂದಿದೆ ಎನ್ನಲಾಗಿದೆ. ನಾಯಿಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಿದಾಗ ಚಾಲಕನ ನಿಯಂತ್ರಣ ತಪ್ಪಿದ್ದು, ರಸ್ತೆ ಬದಿಯಲ್ಲಿನ ಅರಣ್ಯ ಇಲಾಖೆಯ ವಸತಿ ಗೃಹದ ಕಟ್ಟಡಕ್ಕೆ ಢಿಕ್ಕಿ ಹೊಡೆದು ಮಗುಚಿ ಬಿದ್ದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಬೆಂಗಳೂರು ಮೂಲದ ಕುಟುಂಬವೊಂದು ಸಣ್ಣಪುಟ್ಟ ಗಾಯಗಳೊಂದಿಗೆ ಪವಾಡ ಸದೃಶ ಅಪಾಯದಿಂದ ಪಾರಾಗಿದ್ದಾರೆ. ವಸತಿ ಗೃಹದ ಗೋಡೆಗೆ ಹಾನಿಯುಂಟಾಗಿದೆ.

Scroll to Top