(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.09. ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಇದರ ಅಧೀನದಲ್ಲಿ ನಡೆಸಲ್ಪಡುವ ಸರಕಾರಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಪದವಿ ಪೂರ್ವ ಕಾಲೇಜು, ದೇರಳಕಟ್ಟೆ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಇಲ್ಲಿಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡುವ ಸಲುವಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಜಿಯನ್ನು ಮೇ 20 ರೊಳಗೆ ಇತ್ತೀಚಿನ ಒಂದು ಭಾವಚಿತ್ರ (ಪಾಸ್‍ಪೋರ್ಟ್ ಸೈಜ್) ದೊಂದಿಗೆ ಪ್ರಾಂಶುಪಾಲರು, ಸರಕಾರಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಪದವಿ ಪೂರ್ವ ಕಾಲೇಜು ದೇರಳಕಟ್ಟೆ ಮಂಗಳೂರು-18 ದಕ್ಷಿಣ ಕನ್ನಡ ಜಿಲ್ಲೆ ಅಥವಾ ಇ-ಮೇಲ್ mdpudk@gmail.com ಇವರಿಗೆ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ ಮೊಬೈಲ್ ಸಂಖ್ಯೆ: 8970707858 ಸಂಪರ್ಕಿಸಲು ಪ್ರಾಂಶುಪಾಲರು ಅಲ್ಪ ಸಂಖ್ಯಾತರ ಮೊರಾರ್ಜಿ ದೇಸಾಯಿ ಪದವಿ ಪೂರ್ವ ಕಾಲೇಜು ಇವರ ಪ್ರಕಟಣೆ ತಿಳಿಸಿದೆ.
