(ನ್ಯೂಸ್ ಕಡಬ) newskadaba.com,ಮಂಗಳೂರು, ಮೇ 13 ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಸಿ.ಇ.ಟಿ. ಮೂಲಕ ಪ್ರವೇಶಾತಿ ಪಡೆಯುವ ವೃತ್ತಿಪರ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಾರ್ಷಿಕ ಶೇ. 2ರ ಬಡ್ಡಿ ದರದಲ್ಲಿ ವಾರ್ಷಿಕವಾಗಿ ಗರಿಷ್ಠ ರೂ. 1 ಲಕ್ಷಗಳವರೆಗೆ ಸಾಲ ಮಂಜೂರು ಮಾಡಲಾಗುತ್ತದೆ.2019-20ನೇ ಸಾಲಿನಲ್ಲಿ ಸಿ.ಇ.ಟಿ. ಮೂಲಕ ಆಯ್ಕೆಯಾಗಿ ಸಾಲ ಪಡೆಯಬಯಸುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಸಿ.ಇ.ಟಿ.ಗೆ ಪಾವತಿಸಬೇಕಾದ ಶುಲ್ಕವನ್ನು ಸಿ.ಇ.ಟಿ. ಯಿಂದ ಸೀಟು ಪಡೆಯುವ ಹಂತದಲ್ಲಿಯೇ ನಿಗಮದಿಂದ ಸಾಲ ಮಂಜೂರು ಮಾಡಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಹೊಂದಾಣಿಕೆ ಮಾಡಲಾಗುತ್ತದೆ.
2019-20 ನೇ ಸಾಲಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ/ಸಿ.ಇ.ಟಿ. ಮೂಲಕ ಸೀಟು ಪಡೆದು ವೃತ್ತಿಪರ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡಲು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಸಾಲ ಪಡೆಯಬಯಸುವ ಹಿಂದುಳಿದ ವರ್ಗಗಳ ಪ್ರ-1, ಪ್ರ-2ಎ, ಪ್ರ-3ಎ ಮತ್ತು ಪ್ರ -3ಬಿಗೆ ಸೇರಿದ್ದು ( ವಿಶ್ವಕರ್ಮ ಮತ್ತು ಉಪಜಾತಿಗಳು, ಅಲ್ಪ ಸಂಖ್ಯಾತರು ಮತ್ತು ಉಪಜಾತಿಗಳು, ಉಪ್ಪಾರ ಮತ್ತು ಉಪಜಾತಿಗಳು ಹಾಗೂ ಬೆಸ್ತ/ಅಂಬಿಗ ಮತ್ತು ಅದರ ಉಪಜಾತಿಗಳನ್ನು ಹೊರತುಪಡಿಸಿ) ವಿದ್ಯಾರ್ಥಿ ಮತ್ತು ಕುಟುಂಬ ವಾರ್ಷಿಕ ವರಮಾನ ರೂ. 3.50 ಲಕ್ಷಗಳ ಮಿತಿಯಲ್ಲಿ ಇರುವ ವಿದ್ಯಾರ್ಥಿಗಳಿಂದ ಆನ್- ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಷರತ್ತು ಮತ್ತು ನಿಬಂಧನೆಗಳು ಇಂತಿವೆ; ಸರ್ಕಾರದ ಆದೇಶ ಸಂಖ್ಯೆ ಸಕಇ/573/ಬಿಸಿಎ/95 ಬೆಂಗಳೂರು ದಿನಾಂಕ 23/2/1996 ರ ಅನ್ವಯ ಪ್ರವರ್ಗ -1 ಮತ್ತು 2ಎ ಗೆ ಶೇ. 70 ಹಾಗೂ ಪ್ರವರ್ಗ 3ಎ ಮತ್ತು 3ಬಿ ಗಳಿಗೆ ಶೇ. 30 ರಂತೆ ಆಯ್ಕೆ ಮಾಡಲಾಗುವುದು. 2019-20 ನೇ ಸಾಲಿಗೆ ಸರ್ಕಾರವು ಒದಗಿಸಿದ ಅನುದಾನದ ಮಿತಿಯಲ್ಲಿ ಆಯ್ಕೆ ಮಾಡಲಾಗುವುದು. ಸಿ.ಇ.ಟಿ. ಮೂಲಕ ಆಯ್ಕೆಯಾಗುವ ವಿದ್ಯಾರ್ಥಿಗಳನ್ನು ಕೋರ್ಸ್‍ವಾರು ಮತ್ತು ರ್ಯಾಂಕ್‍ವಾರು ಆಧಾರದಲ್ಲಿ ಸಾಲ ಮಂಜೂರಾತಿಗೆ ಆಯ್ಕೆ ಮಾಡಲಾಗುವುದು. ಸಾಲ ಪಡೆಯಲು ಇಚ್ಚಿಸುವ ವಿದ್ಯಾರ್ಥಿಗಳು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವೆಬ್‍ಸೈಟ್ www.Karnataka.gov.in/dbcdc ರಲ್ಲಿ ಲಾಗಿನ್ ಆಗಿ ವೆಬ್‍ಸೈಟ್‍ನಲ್ಲಿ ಲಭ್ಯವಿರುವ username – arivu ಮತ್ತು Password-arivu@123ನ್ನು ನಮೂದಿಸಿ ಅರ್ಜಿಯನ್ನು ಆನ್‍ಲೈನ್‍ನಲ್ಲಿ ಭರ್ತಿ ಮಾಡುವುದು.
ಮೂಲ ದಾಖಲೆಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಿದ್ಯಾರ್ಥಿ ಮತ್ತು ಪೋಷಕರ ಭಾವಚಿತ್ರ, ಆಧಾರ್ ಕಾರ್ಡ್ /ಚುನಾವಣಾ ಗುರುತಿನ ಚೀಟಿ, ಎಸ್.ಎಸ್.ಎಲ್.ಸಿ. ಅಂಕಪಟ್ಟಿ, ಸಿ.ಇ.ಟಿ/ನೀಟ್ ಪ್ರವೇಶ ಪರೀಕ್ಷೆ ಅಡ್ಮಿಷನ್ ಟಿಕೆಟ್ ಸ್ಕ್ಯಾನ್ ಮಾಡಿ ಅರ್ಜಿಯೊಂದಿಗೆ ಆನ್‍ಲೈನ್‍ನಲ್ಲಿ ಮೇ 24 ರೊಳಗೆ ಸಲ್ಲಿಸಬೇಕು. ವಿದ್ಯಾರ್ಥಿಯು ಒಂದೇ ಜಿಲ್ಲೆಯಲ್ಲಿ ಅರ್ಜಿಯನ್ನು ಆನ್‍ಲೈನ್‍ನಲ್ಲಿ ಸಲ್ಲಿಸಬೇಕು ಹೆಚ್ಚಿನ ಜಿಲ್ಲೆಯಲ್ಲಿ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಿದಲ್ಲಿ ತಿರಸ್ಕರಿಸಲಾಗುವುದು. ಹೆಚ್ಚಿನ ಮಾಹಿತಿಗೆ ಆಯಾ ಜಿಲ್ಲೆಯಲ್ಲಿನ ನಿಗಮದ ಜಿಲ್ಲಾ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ರೇಡಿಯೋ ಪಾರ್ಕ್, ಉರ್ವಸ್ಟೋರ್, ಮಂಗಳೂರು ಕಚೇೀರಿಯನ್ನು ಅಥವಾ ಸಹಾಯವಾಣಿ : 0824-2456544 ಸಂಪರ್ಕಿಸಬಹುದು. ಎಂದು ಜಿಲ್ಲಾ ವ್ಯವಸ್ಥಾಪಕರು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ(ನಿ), ದಕ್ಷಿಣ ಕನ್ನಡ ಜಿಲ್ಲೆ ಇವರ ಪ್ರಕಟಣೆ ತಿಳಿಸಿದೆ.