ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com,ಮಂಗಳೂರು,ಮೇ.14.ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ಮತ್ತು ಮಕ್ಕಳಿಗೆ ಒಂದೇ ಸೂರಿನಡಿ ಸಮಗ್ರ ಸೌಲಭ್ಯ ನೀಡುವರೇ ಜಿಲ್ಲಾ ಲೇಡಿಗೋಷನ್ ಆಸ್ಪತ್ರೆಯ ಗೆಳತಿ ವಿಶೇಷ ಚಿಕಿತ್ಸಾ ಘಟಕದಲ್ಲಿ ತೆರವಾಗಿರುವ ಸಮಾಜ ಸೇವಾ ಕಾರ್ಯಕರ್ತೆಯ 2 ಹುದ್ದೆ ಬಿ.ಎಸ್.ಡಬ್ಲ್ಯೂ/ಬಿ.ಎ (ಸೈಕಾಲಜಿ) ಹಾಗೂ 1 ವರ್ಷದ ಕಂಪ್ಯೂಟರ್ ಅನುಭವವುಳ್ಳ 22 ರಿಂದ 35 ವರ್ಷದೊಳಗಿನ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಮಾಸಿಕ ಗೌರವಧನ ರೂ.10,000/-ಆಗಿರುತ್ತದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಮೇ 18.ಹೆಚ್ಚಿನ ವಿವರಗಳಿಗೆ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕಟ್ಟಡ, ಮಂಗಳೂರು ದೂರವಾಣಿ ಸಂಖ್ಯೆ: 0824-2451254 ಈ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.

Also Read  ಮಳವೂರು ಗ್ರಾಮಸಭೆ

error: Content is protected !!
Scroll to Top