ಗ್ರಾಮ ಪಂಚಾಯತ್‍ಗಳ ಉಪ ಚುನಾವಣೆ

(ನ್ಯೂಸ್ ಕಡಬ) newskadaba.com,ಮಂಗಳೂರು,ಮೇ.14. ಕರ್ನಾಟಕ ಪಂಚಾಯತ್ ರಾಜ್ ಅಧಿನಿಯಮದ ಉಪಬಂಧಗಳ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಪುತ್ತೂರು ಹಾಗೂ ಬೆಳ್ತಂಗಡಿ ತಾಲೂಕಿನ ಗ್ರಾಮ ಪಂಚಾಯತ್‍ಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಯಲಿದೆ. ಮೇ 16 ನಾಮಪತ್ರ ಸಲ್ಲಿಸಲು ಕೊನೆಯ ದಿನ, ನಾಮಪತ್ರ ಪರಿಶೀಲಿಸುವ ದಿನ ಮೇ 17, ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳುಲು ಕೊನೆಯ ದಿನ ಮೇ 20, ಮತದಾನ ಅವಶ್ಯವಿದ್ದರೆ ಮತದಾನವನ್ನು ನಡೆಸಬೇಕಾದ ದಿನ ಮೇ 29 ರಂದು ಪೂರ್ವಾಹ್ನ 7 ರಿಂದ ಸಂಜೆ 5 ಗಂಟೆಯವರೆಗೆ, ಮರು ಮತದಾನ ಅವಶ್ಯವಿದ್ದರೆ ಮತದಾನವನ್ನು ನಡೆಸಬೇಕಾದ ದಿನ ಮೇ 30 ರಂದು ಪೂರ್ವಾಹ್ನ 7 ರಿಂದ ಸಂಜೆ 5 ಗಂಟೆಯವರೆಗೆ, ಮತಗಳ ಎಣಿಕೆ ಮೇ 31 ರಂದು ಪೂರ್ವಾಹ್ನ 8 ಗಂಟೆಯಿಂದ ತಾಲೂಕು ಕೇಂದ್ರಗಳಲ್ಲಿ ನಡೆಯಲಿದೆ ಮೇ 31 ರಿಂದ ಮೊದಲೇ ಚುನಾವಣೆಯನ್ನು ಮುಕ್ತಾಯಗೊಳಿಸಬೇಕು ಎಂದು ಜಿಲ್ಲಾಧಿಕಾರಿ ದಕ್ಷಿಣ ಕನ್ನಡ ಜಿಲ್ಲೆ ಎಸ್ ಸಸಿಕಾಂತ್ ಸೆಂಥಿಲ್ ಇವರ ಪ್ರಕಟಣೆ ತಿಳಿಸಿದೆ.

Also Read  ಬಿಎಸ್ ವೈ ಪ್ರಮಾಣವಚನ ➤ಇಂದು ದೈವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

error: Content is protected !!
Scroll to Top