(ನ್ಯೂಸ್ ಕಡಬ) newskadaba.com,ಬೆಂಗಳೂರು,ಮೇ.14. ಮಂಗಳವಾರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನನ್ನ ಯಾವ ಕಾರ್ಯಕ್ರಮವೂ ತಾತ್ಕಾಲಿಕ ಅಲ್ಲ. ಅನ್ನಭಾಗ್ಯ,ಕ್ಷೀರಭಾಗ್ಯ,ಕ್ಷೀರಧಾರೆ, ಕೃಷಿಭಾಗ್ಯ, ಪಶುಭಾಗ್ಯ….ಇವುಗಳನ್ನು ಯಾವುದೇ ಸರ್ಕಾರ ನಿಲ್ಲಿಸಲಿ ನೋಡೋಣ. ಜಾಗೃತ ಮತದಾರರು ಇರುವ ವರೆಗೆ ಇವೆಲ್ಲ ಶಾಶ್ವತ ಕಾರ್ಯಕ್ರಮಗಳು. ಟೀಕಾಕಾರರಿಗೆ ನೆನಪಿರಲಿ. ಎಂದು ಮಂಗಳವಾರ ಟ್ವೀಟ್ ಮೂಲಕ ಎಚ್ಚರಿಕೆ ನೀಡಿದ್ದಾರೆ.ಇನ್ನೊಂದು ಟ್ವೀಟ್‌ನಲ್ಲಿ ಗೆಳೆಯ ಜಿ.ಟಿ.ದೇವೇಗೌಡರು ಇತ್ತೀಚೆಗೆ ನನ್ನ ವಿರುದ್ಧ ಮಾತನಾಡಿಲ್ಲ ನಿಜ. ಆದರೆ ಮೈಸೂರಲ್ಲಿ ಜೆಡಿಎಸ್ ನವರು ಬಿಜೆಪಿಗೆ ಮತ ಹಾಕಿದ್ದಾರೆಂಬ ಅವರ ಹೇಳಿಕೆ ಸತ್ಯವಾಗಿದ್ದರೂ ಅನಗತ್ಯವಾಗಿತ್ತು. ಇದರಿಂದಾಗಿ ಕೆರಳಿದ ನಮ್ಮ ಕಾರ್ಯಕರ್ತರು ಜೆಡಿಎಸ್ ವಿರುದ್ಧ ಮಾತನಾಡತೊಡಗಿದ್ದರು. ಮೈತ್ರಿಕೂಟದಲ್ಲಿ ಇಂತಹದನ್ನು ಮಾಡಬಾರದು ಎಂದು ಬರೆದಿದ್ದಾರೆ.
ನಮಗೂ ಟಚ್ನಲ್ಲಿ ಇದ್ದಾರೆ
ಎಎನ್‌ಐ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ , ಬಿಜೆಪಿಯ ಕೆಲ ಎಂಎಲ್‌ಎಗಳು ನಮ್ಮ ಟಚ್‌ನಲ್ಲೂ ಇದ್ದಾರೆ ಎಂದು ಬಾಂಬ್ ಸಿಡಿಸಿದ್ದಾರೆ.
ಸಮನ್ವಯಸಮಿತಿಯಲ್ಲಿಚರ್ಚೆ
ನಾನು ಸಮನ್ವಯ ಸಮಿತಿಯಲ್ಲಿ ಚರ್ಚೆ ಮಾಡುತ್ತೇನೆ, ಜೆಡಿಎಸ್ ರಾಜ್ಯಾಧ್ಯಕ್ಷ ವಿಶ್ವನಾಥ್ ಅವರ ಹೇಳಿಕೆಗಳ ಕುರಿತು ಯಾವುದೇ ರೀತಿಯ ಸಾರ್ವಜನಿಕ ಚರ್ಚೆ ಇಲ್ಲ ಎಂದು ಹೇಳಿದ್ದಾರೆ.
2023ರಲ್ಲಿ ಆಗಬಾರದೆ?
2023ರಲ್ಲಿನಾನು ಮತ್ತೆ ಸಿಎಂ ಆಗಬಾರದೇ ಎಂದು ಜನರು ಅಭಿಮಾನದಿಂದ ಹೇಳುತ್ತಾರೆ, ಜನರ ಬಾಯಿ ಮುಚ್ಚಲು ಆಗುತ್ತದೆ ಎಂದು ಪ್ರಶ್ನಿಸಿದರು.ಮುಂದಿನ ಚುನಾವಣೆ ಆದ ಮೇಲೆ ಜನ ಆಶೀರ್ವಾದ ಮಾಡಿದರೆ ಸಿಎಂ ಆಗಬಾರದು ಅಂತ ಇದೆಯಾ ?ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲವೆಂದು ನಾನು ಈಗಾಗಲೇ ಹೇಳಿದ್ದೇನೆ ಎಂದು ಇದೇ ವೇಳೆ ಹೇಳಿದರು.