ಕಡಬದ ಹಿರಿಯ ಉದ್ಯಮಿ, ತಾಲೂಕು ಹೋರಾಟ ಸಮಿತಿಯ ಅಧ್ಯಕ್ಷ ಸಿ.ಫಿಲಿಪ್ ವಿಧಿವಶ

(ನ್ಯೂಸ್ ಕಡಬ) newskadaba.com ಕಡಬ, ಮೇ.17. ತಾಲೂಕು ಹೋರಾಟ ಸಮಿತಿಯ ಅಧ್ಯಕ್ಷ, ಹಿರಿಯ ಉದ್ಯಮಿ, ಸಾಮಾಜಿಕ ಮುಂದಾಳು ಸಿ.ಫಿಲಿಪ್ ಅಲ್ಪ ಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಅವರಿಗೆ 79 ವರ್ಷ ವಯಸ್ಸಾಗಿತ್ತು. ಸೈಂಟ್ ಜೋಕಿಮ್ಸ್ ವುಡ್ ಇಂಡಸ್ಟ್ರೀಸ್, ಅನುಗ್ರಹ ಸಭಾಭವನ, ಅನುಗ್ರಹ ಕಾಂಪ್ಲೆಕ್ಸ್ ಸೇರಿದಂತೆ ಕಡಬದಲ್ಲಿ ವಿವಿಧ ಸಂಸ್ಥೆಗಳನ್ನು ಸ್ಥಾಪಿಸಿ ಉದ್ಯಮ ರಂಗಕ್ಕೆ ಮಹತ್ತರ ಕೊಡುಗೆ ನೀಡಿದ್ದ ಅವರು ಕೆಲವು ಸಮಯಗಳಿಂದ ಕ್ಯಾನ್ಸರ್ ಗೆ ತುತ್ತಾಗಿದ್ದರು. ಕಳೆದ ಮೂರು ದಿನಗಳಿಂದ ಮಂಗಳೂರಿನ ಕೊಲಾಸೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಶುಕ್ರವಾರ ಬೆಳಗ್ಗಿನ ಜಾವ ಮೃತಪಟ್ಟರು.

Also Read  ಮಡಿಕೇರಿ: ಕಾಲುಜಾರಿ ಬಿದ್ದು ಎನ್‍ಸಿಸಿ ಅಧಿಕಾರಿ ಮೃತ್ಯು

error: Content is protected !!
Scroll to Top