(ನ್ಯೂಸ್ ಕಡಬ) newskadaba.com,ಮಂಗಳೂರು,ಮೇ.17.ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮ ಪಂಚಾಯತ್‍ಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಯಲಿದ್ದು ಈ ಸಮಯ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗರೂಕತಾ ಕ್ರಮವಾಗಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಠಿಯಿಂದ, ಕರ್ನಾಟಕ ಅಬಕಾರಿ ಸನ್ನದುಗಳ (ಸಾಮಾನ್ಯ ಷರತ್ತುಗಳು) ನಿಯಮ 1967 ರ ನಿಯಮ 10-ಬಿ ಯಲ್ಲಿ ಪ್ರದತ್ತವಾದ ಅಧಿಕಾರ ಚಲಾಯಿಸಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಪಡುಪೆರಾರ ಮತ್ತು ತಲಪಾಡಿ ಗ್ರಾಮ ಪಂಚಾಯತ್, ಪುತ್ತೂರು ತಾಲೂಕಿನ ಕಬಕ ಮತ್ತು ನೆಕ್ಕಿಲಾಡಿ ಗ್ರಾಮ ಪಂಚಾಯತ್ ಹಾಗೂ ಬೆಳ್ತಂಗಡಿ ತಾಲೂಕಿನ ಉಜಿರೆ ಮತ್ತು ಕೊಯ್ಯೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮೇ 13 ರಂದು ಪೂರ್ವಾಹ್ನ 7 ಗಂಟೆಯಿಂದ ಮೇ 31 ರಂದು ಮಧ್ಯರಾತ್ರಿಯವರೆಗೆ ಮತ್ತು ಮೇ 31 ರಂದು ಪೂರ್ವಾಹ್ನ 7 ಗಂಟೆಯಿಂದ ಮಧ್ಯರಾತ್ರಿಯವರೆಗೆ ಮತ ಎಣಿಕೆಯ ಸಲುವಾಗಿ ಮತ ಎಣಿಕೆ ನಡೆಯುವ ಕೇಂದ್ರಗಳ 3 ಕಿ.ಮೀ ವ್ಯಾಪ್ತಿ ಪ್ರದೇಶಗಳನ್ನು ಮದ್ಯ ಮುಕ್ತ ದಿನಗಳೆಂದು(ಡ್ರೈಡೇಸ್) ಘೋಷಿಸಿ ಈ ದಿನಗಳಲ್ಲಿ ಎಲ್ಲಾ ವಿಧದ ಮದ್ಯದಂಗಡಿಗಳನ್ನು ಮತ್ತು ಇನ್ನುಳಿದ ಯಾವುದೇ ವಿಧದ ಮದ್ಯ ಮಾರಾಟದ ಪರವಾನಿಗೆ ಇರುವಂತಹ ಅಂಗಡಿಗಳನ್ನು ಹಾಗೂ ಮಾರಾಟ ಕೇಂದ್ರಗಳನ್ನು ಮುಚ್ಚುವಂತೆ ಹಾಗೂ ಈ ದಿನಗಳಲ್ಲಿ ಮಂಗಳೂರು ತಾಲೂಕಿನ ಪಡುಪೆರಾರ್ ಮತ್ತು ತಲಪಾಡಿ ಗ್ರಾಮ ಪಂಚಾಯತ್, ಪತ್ತೂರು ತಾಲೂಕಿನ ಕಬಕ ಮತ್ತು ನೆಕ್ಕಿಲಾಡಿ ಗ್ರಾಮ ಪಂಚಾಯತ್ ಹಾಗೂ ಬೆಳ್ತಂಗಡಿ ತಾಲೂಕಿನ ಉಜಿರೆ ಮತ್ತು ಕೊಯ್ಯೂರು ಗ್ರಾಮ ಪಂಚಾಯತ್ ಪ್ರದೇಶಗಳಲ್ಲಿ ಸೂಚಿತ ಅವಧಿಯಲ್ಲಿ ಯಾವುದೇ ಹೊಟೇಲುಗಳಲ್ಲಾಗಲೀ ನಾನ್ ಪ್ರೊಪ್ರೈಟರ್‍ಗಳಲ್ಲಿ, ಸ್ಟಾರ್ ಹೋಟೆಲ್‍ಗಳಲ್ಲಾಗಲೀ ಮದ್ಯ ಮಾರಾಟ ಅಥವಾ ಸರಬರಾಜು ಮಾಡುವುದನ್ನು ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಎಸ್ ಸಸಿಕಾಂತ್ ಸೆಂಥಿಲ್ ಇವರು ನಿಷೇಧಿಸಿ ಆದೇಶಿಸಿರುತ್ತಾರೆ.