ಸುಬ್ರಹ್ಮಣ್ಯ: ದೇವರ ಕಾಣಿಕೆ ಹುಂಡಿಗೆ ಕನ್ನ ➤ ಹಣ ಎಗರಿಸುತ್ತಿದ್ದಾಗ ಸಿಕ್ಕಿಬಿದ್ದ ಆರೋಪಿ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಮೇ.17. ದಕ್ಷಿಣ ಭಾರತದ ಅತ್ಯಂತ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕುಕ್ಕೇ ಸುಬ್ರಹ್ಮಣ್ಯ ದೇವರ ಹುಂಡಿಗೆ ಕನ್ನ ಹಾಕುತ್ತಿದ್ದ ವ್ಯಕ್ತಿಯನ್ನು ಬಂಧಿಸಿರುವ ಸುಬ್ರಹ್ಮಣ್ಯ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಬಂಧಿತ ಆರೋಪಿಯನ್ನು ತುಮಕೂರು ಮೂಲದ ಅಶ್ವಿನ್ ಎಂದು ಗುರುತಿಸಲಾಗಿದೆ. ಆರೋಪಿಯು ಗುರುವಾರದಂದು ದೇವಸ್ಥಾನದ ಕಾಣಿಕೆ ಹುಂಡಿಯಿಂದ ಹಣವನ್ನು ಎಗರಿಸುತ್ತಿದ್ದ ವೇಳೆ ಸಿಬ್ಬಂದಿಗಳು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Also Read  ಅನ್ನಭಾಗ್ಯ ಅಕ್ಕಿಯ ಬದಲಾಗಿ ಜುಲೈ ತಿಂಗಳಿಂದಲೇ ಹಣ ವಿತರಣೆ

error: Content is protected !!