ಪುತ್ತೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ ➤ ಆರೋಪಿ ಮದರಸ ಅಧ್ಯಾಪಕನ ಬಂಧನ

(ನ್ಯೂಸ್ ಕಡಬ) newskadaba.com ಪುತ್ತೂರು, ಮೇ.18. ಅಪ್ರಾಪ್ತ ವಿದ್ಯಾರ್ಥಿಯೋರ್ವನಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಆರೋಪಿ ಮದರಸ ಅಧ್ಯಾಪಕನನ್ನು ಬಂಧಿಸಿರುವ ಪುತ್ತೂರು ಮಹಿಳಾ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬಂಧಿತ ಆರೋಪಿಯನ್ನು ಕೆಮ್ಮಿಂಜೆ ಗ್ರಾಮದ ಮೊಟ್ಟೆತ್ತಡ್ಕ ದಿ.ಅಬ್ದುಲ್ಲಾ ಎಂಬವರ ಪುತ್ರ ಪುತ್ತೂರಿನ ಮದರಸವೊಂದರಲ್ಲಿ ಅಧ್ಯಾಪಕನಾಗಿದ್ದ ಅನ್ವರ್ ಮೌಲವಿ(41) ಎಂದು ಗುರುತಿಸಲಾಗಿದೆ. ಆರೋಪಿಯು ಮಾರ್ಚ್ ಮತ್ತು ಎಪ್ರಿಲ್ ತಿಂಗಳಿನಲ್ಲಿ ಬಾಲಕನಿಗೆ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೆ, ಈ ವಿಚಾರವನ್ನು ಯಾರಿಗಾದರೂ ತಿಳಿಸಿದರೆ ಸಾಯಿಸುವುದಾಗಿ ಕೊಲೆ ಬೆದರಿಕೆಯೊಡ್ಡಿದ್ದು, ಈ ಹಿನ್ನೆಲೆಯಲ್ಲಿ ಬಾಲಕನು ಮದರಸಕ್ಕೆ ಹಾಗೂ ಮಸೀದಿಗೆ ನಮಾಝ್‌ಗೆ ಹೋಗದೇ ಇದ್ದುದನ್ನು ಕಂಡು ಗುರುವಾರದಂದು ಬಾಲಕನ ತಾಯಿ ವಿಚಾರಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಈ ಬಗ್ಗೆ ಬಾಲಕ ನೀಡಿದ ದೂರಿನಂತೆ ಪುತ್ತೂರು ಮಹಿಳಾ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

Also Read  ಉಡುಪಿ: ಕೃಷ್ಣ ಮಠ, ಕಮಲಶಿಲೆ, ಕೊಲ್ಲೂರು ದೇಗುಲಕ್ಕೆ ಡಿಕೆಶಿ ಭೇಟಿ

error: Content is protected !!
Scroll to Top