ಲೋಕಾಯುಕ್ತರ ಭೇಟಿ – ದೂರು ಅರ್ಜಿ ಸ್ವೀಕಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.18. ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ವಿವಿಧ ದಿನ ವಿವಿಧ ಸ್ಥಳಗಳಿಗೆ ಭೇಟಿ ನೀಡಿ, ಸಾರ್ವಜನಿಕರಿಂದ ದೂರು ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ. ಮೇ 27 ರಂದು ಪೂರ್ವಾಹ್ನ 11 ಗಂಟೆಯಿಂದ ಅಪರಾಹ್ನ 1 ಗಂಟೆಯವರೆಗೆ ಸುಳ್ಯ ತಾಲೂಕು ಕಚೇರಿ, ಮೇ 28 ರಂದು ಪೂರ್ವಾಹ್ನ 11 ಗಂಟೆಯಿಂದ 1 ಗಂಟೆಯವರೆಗೆ ಪುತ್ತೂರು ತಾಲೂಕು ಕಚೇರಿ, ಮೇ 29 ರಂದು ಪೂರ್ವಾಹ್ನ 11 ಗಂಟೆಯಿಂದ ಅಪರಾಹ್ನ 1 ಗಂಟೆಯವರೆಗೆ ಮೂಡಬಿದ್ರೆ ತಹಶೀಲ್ದಾರರ ಕಚೇರಿ, ಅಪರಾಹ್ನ 3 ಗಂಟೆಯಿಂದ 4.30 ರವರೆಗೆ ಮಂಗಳೂರು ತಾಲೂಕು ಕಚೇರಿ, ಮೇ 31 ರಂದು ಪೂರ್ವಾಹ್ನ 11 ಗಂಟೆಯಿಂದ ಅಪರಾಹ್ನ 1 ಗಂಟೆಯವರೆಗೆ ಬೆಳ್ತಂಗಡಿ ತಾಲೂಕು ಕಚೇರಿ, ಅಪರಾಹ್ನ 3 ಗಂಟೆಯಿಂದ 4.30 ರವರೆಗೆ ಬಂಟ್ವಾಳ ತಾಲೂಕು ಕಚೇರಿಗೆಭೇಟಿ ನೀಡಲಿದ್ದಾರೆ.

Also Read  ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಇವರ ವತಿಯಿಂದ ಸಾಲ ಸೌಲಭ್ಯ - ಆನ್‍ಲೈನ್ ಅರ್ಜಿ ಆಹ್ವಾನ

ಇದಲ್ಲದೇ ಉಳಿದ ದಿನಗಳಲ್ಲೂ ಕಚೇರಿ ವೇಳೆಯಲ್ಲಿ ಸಹ ಸಾರ್ವಜನಿಕರು ತಮ್ಮ ಅಹವಾಲು/ದೂರುಗಳನ್ನು ನೀಡಬಹುದಾಗಿದೆ ಅಥವಾ ದೂರವಾಣಿ ಮೂಲಕವೂ ಸಂಪರ್ಕಿಸಬಹುದಾಗಿದೆ. ಅನಾಮಧೇಯ ಅರ್ಜಿಗಳು ಬಂದಲ್ಲಿ ಯಾವುದೇ ಕ್ರಮ ತೆಗೆದುಕೊಳ್ಳಲು ಸಾಧ್ಯವಾಗುವುದಿಲ್ಲ. ಅರ್ಜಿದಾರರು ನಮೂನೆ I & IIರಲ್ಲಿ ಭರ್ತಿ ಮಾಡಿ ನೋಟರಿಯಿಂದ ಅಫಿದಾವಿತ್ ಮಾಡಿ ಸಲ್ಲಿಸಿದ ಅರ್ಜಿಗಳನ್ನು ಈ ಕಚೇರಿಗೆ ಅಥವಾ ನೇರವಾಗಿ ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬಹುಮಹಡಿಗಳ ಕಟ್ಟಡ, ಡಾ/ಬಿ.ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು-560001 ರವರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : ಪೊಲೀಸ್ ಅಧೀಕ್ಷಕರ ಕಚೇರಿ -0824- 2429197, 9448390987 ,ಪೊಲೀಸ್ ಉಪಾಧೀಕ್ಷಕರ ಕಚೇರಿ -0824-2453420, 9886542369 ಪೊಲೀಸ್ ನಿರೀೀಕ್ಷಕರ ಕಚೇರಿ- 0824-2427237 ,8861688100 ,9448530051, 9449044377 ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.

Also Read  ಬಿಳಿನೆಲೆ : ಬಡ ವಿದ್ಯಾರ್ಥಿಗಳ ಆನ್ ಲೈನ್ ಶಿಕ್ಷಣಕ್ಕೆ ಸ್ಮಾರ್ಟ್ ಫೋನ್ ನೀಡಿದ ಹಳೆ ವಿದ್ಯಾರ್ಥಿಗಳು

error: Content is protected !!
Scroll to Top