(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.18. ದಕ್ಷಿಣ ಕನ್ನಡ ಜಿಲ್ಲೆಯ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಮೇ 21 ರಂದು ಪೂರ್ವಾಹ್ನ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯ ವರೆಗೆ ಸುಳ್ಯ ಸರ್ಕಾರಿ ಪ್ರವಾಸಿ ಮಂದಿರ ಅಪರಾಹ್ನ 2 ಗಂಟೆಯಿಂದ 4 ಗಂಟೆಯ ವರೆಗೆ ಡಾ ಅಂಬೇಡ್ಕರ್ ಭವನ ಕಡಬ ಇಲ್ಲಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಭ್ರಷ್ಟಾಚಾರಕ್ಕೆ ಸಂಬಂಧಪಟ್ಟ ದೂರುಗಳನ್ನು ಸ್ವೀಕರಿಸಲಿದ್ದಾರೆ ಎಂದು ಪೊಲೀಸ್ ನಿರೀಕ್ಷಕರು, ಭ್ರಷ್ಟಾಚಾರ ನಿಗ್ರಹ ದಳ ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.
ಮೇ.21ರಂದು ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಸುಳ್ಯ ಮತ್ತು ಕಡಬಕ್ಕೆ..!! ➤ ಸರಕಾರಿ ಕಛೇರಿಗಳಲ್ಲಿ ನಡೆಯುವ ಲಂಚದ ಬಗ್ಗೆ ದೂರು ಸ್ವೀಕಾರ
