ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ ಅತಿಥಿ ಶಿಕ್ಷಕರು/ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.18. ದಕ್ಷಿಣ ಕನ್ನಡ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖಾ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಂಗಳೂರು ತಾಲೂಕಿನ ಮೆನ್ನಬೆಟ್ಟು ಗ್ರಾಮದ ಕಮ್ಮಾಜೆಯ ಮೊರಾರ್ಜಿ ದೇಸಾಯಿ ವಸತಿ ಶಾಲಾ ವಿಭಾಗದಲ್ಲಿನ ಗಣಿತ, ವಿಜ್ಞಾನ, ಕನ್ನಡ ಸಹಶಿಕ್ಷಕರ ಹುದ್ದೆಗಳಿಗೆ ಹಾಗೂ ಕಾಲೇಜು ವಿಭಾಗದ ಗಣಿತ, ಭೌತಶಾಸ್ತ್ರ, ಜೀವಶಾಸ್ತ್ರ, ರಸಾಯನಶಾಸ್ತ್ರ ಮತ್ತು ಗಣಕ ವಿಜ್ಞಾನ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಮಾಸಿಕ ಗೌರವಧನದ ಮೇರೆಗೆ ನಿಗದಿತ ವಿದ್ಯಾರ್ಹತೆಯನ್ನು ಹೊಂದಿರುವ ಆಸಕ್ತ ಅಭ್ಯರ್ಥಿಗಳು ಅತಿಥಿü ಶಿಕ್ಷಕರು ಹಾಗೂ ಉಪನ್ಯಾಸಕರ ಹುದ್ದೆಗಳಿಗೆ ಮೇ 25 ರೊಳಗೆ ಅರ್ಜಿಯನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಶಾಲಾ ಪ್ರಾಂಶುಪಾಲರನ್ನು ಮೊಬೈಲ್ ಸಂಖ್ಯೆ 9480241974 ಸಂಪರ್ಕಿಸಬೇಕು ಎಂದು ಪ್ರಾಂಶುಪಾಲರು ಮೊರಾರ್ಜಿ ದೇಸಾಯಿ ವಸತಿ ಶಾಲೆ ಕಮ್ಮಾಜೆ, ಮೆನ್ನಬೆಟ್ಟು, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Also Read  ಸುಬ್ರಹ್ಮಣ್ಯ: ಎಂಟನೇ ತರಗತಿಯ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ► ಗರ್ಭಿಣಿಯಾದ ಬಾಲಕಿ - ಆರೋಪಿಯ ಬಂಧನ

error: Content is protected !!
Scroll to Top