ಕಡಬ: ಮನೆಯ ಅಂಗಳಕ್ಕೆ ಉರುಳಿ ಬಿದ್ದ ಓಮ್ನಿ ಕಾರು ➤ ಚಾಲಕ ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಕಡಬ, ಮೇ.19. ಮಾರುತಿ ಓಮ್ನಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಭಾನುವಾರದಂದು ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಳಾರದಲ್ಲಿ ಸಂಭವಿಸಿದೆ.

ಕಡಬದ ಬಸ್ ನಿಲ್ದಾಣದ ಬಳಿ ವ್ಯಾಪಾರ ನಡೆಸುತ್ತಿರುವ ಅಬ್ಬಾಸ್ ಎಂಬವರು ತನ್ನ ಮಾರುತಿ ಓಮ್ನಿ ಕಾರಿನಲ್ಲಿ ಉಪ್ಪಿನಂಗಡಿಯಿಂದ ಕಡಬಕ್ಕೆ ತೆರಳುತ್ತಿದ್ದಾಗ ಕಳಾರ ಸಮೀಪ ಬೇರೊಂದು ವಾಹನವು ಇವರ ಓಮ್ನಿಯನ್ನು ಓವರ್ ಟೇಕ್ ಮಾಡಿದ್ದು, ಈ ಸಂದರ್ಭದಲ್ಲಿ ರಸ್ತೆ ಬಿಟ್ಟು ಕೊಡುವ ಸಂದರ್ಭದಲ್ಲಿ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಮನೆಯೊಂದರ ಅಂಗಳಕ್ಕೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಚಾಲಕ ಅಬ್ಬಾಸ್ ರವರು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ.

Also Read  ಬೆಳ್ತಂಗಡಿ: ಕಿಡಿಗೇಡಿಗಳಿಂದ ಮಸೀದಿಗೆ ಬಿಯರ್ ಬಾಟಲಿ ಎಸೆದು ದುಷ್ಕೃತ್ಯ..!

error: Content is protected !!
Scroll to Top