(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.20.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗ್ರಾಮ ಪಂಚಾಯತ್‍ಗಳಿಗೆ 2019 ರ ಸಾಲಿನ ಉಪ ಚುನವಾಣೆಗಳು ನಡೆಯಲಿದ್ದು, ಪೊಲೀಸ್ ಆಯುಕ್ತರ ಕಾರ್ಯವ್ಯಾಪ್ತಿಯನ್ನು ಹೊರತುಪಡಿಸಿ, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು (1- ಕಬಕ ಮತ್ತು 5- 34 ನೆಕ್ಕಿಲಾಡಿ) ಮತ್ತು ಬೆಳ್ತಂಗಡಿ (28 ಉಜಿರೆ ಮತ್ತು 29 ಕೊಯ್ಯೂರು) ಗ್ರಾಮ ಪಂಚಾಯತಿಗಳಿಗೆ ಸಂಬಂಧಪಟ್ಟಂತೆ ಆಯುಧ ಪರವಾನಿಗೆ ಹೊಂದಿರುವ ಪರವಾನಿಗೆದಾರರು ತನ್ನ ಎಲ್ಲಾ ಶಸ್ತ್ರಾಸ್ತ್ರಗಳನ್ನು ಮೇ 27 ರೊಳಗೆ ಠೇವಣಿ ಇರಿಸಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿಗಳಾದ ಎಸ್ ಸಸಿಕಾಂತ್ ಸೆಂಥಿಲ್ ಆದೇಶಿಸಿದ್ದಾರೆ.
ಜಿಲ್ಲೆಯ ಪ್ರಸಕ್ತ ಕಾನೂನು ಸುವ್ಯವಸ್ಥೆ ಸಾರ್ವಜನಿಕ ಶಾಂತಿ ಸುರಕ್ಷತೆಯ ಹಿತದೃಷ್ಠಿಯಿಂದ ಪೊಲೀಸ್ ಆಯುಕ್ತರ ಕಾರ್ಯವ್ಯಾಪ್ತಿಯನ್ನು ಹೊರತುಪಡಿಸಿ, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು (1- ಕಬಕ ಮತ್ತು 5- 34 ನೆಕ್ಕಿಲಾಡಿ) ಮತ್ತು ಬೆಳ್ತಂಗಡಿ (28 ಉಜಿರೆ ಮತ್ತು 29 ಕೊಯ್ಯೂರು) ಗ್ರಾಮ ಪಂಚಾಯತಿಗಳಿಗೆ ಸಂಬಂಧಪಟ್ಟಂತೆ ಬೆಳೆ ರಕ್ಷಣೆಗಾಗಿ ಮತ್ತು ಆತ್ಮ ರಕ್ಷಣೆಗಾಗಿ ಮಂಜೂರು ಮಾಡಲಾಗಿರುವ ಶಸ್ತ್ರಾಸ್ತ್ರ ಪರವಾನಿಗೆಗಳನ್ನು ಹೊಂದಿರುವ ಎಲ್ಲಾ ಶಸ್ತ್ರಾಸ್ತ್ರಗಳನ್ನು ಚುನಾವಣಾ ಅವಧಿಯಲ್ಲಿ ಠೇವಣಿಯಲ್ಲಿರಿಸಲು ಆದೇಶಿಸುವುದು ಅವಶ್ಯವೆಂದು ಮನಗಂಡು ಈ ಆದೇಶವನ್ನು ಹೊರಡಿಸಲಾಗಿದೆ.ಆತ್ಮ ರಕ್ಷಣೆಗಾಗಿ ಶಸ್ತ್ರಾಸ್ತ್ರ ಪರವಾನಿಗೆ ಹೊಂದಿರುವ ಪರವಾನಿಗೆದಾರರು ತಮ್ಮ ಪರವಾನಿಗೆಯಲ್ಲಿ ಹೊಂದಿರುವ ಆಯುಧಗಳನ್ನು ತಕ್ಷಣ ಹತ್ತಿರದ ಪೊಲೀಸ್ ಠಾಣೆ ಅಥವಾ ನಮೂನೆ ನಂಬ್ರ 8 ರ ಪರವಾನಿಗೆ ಹೊಂದಿರುವ ಅಧಿಕೃತ ಕೋವಿ ಮದ್ದುಗುಂಡು ವ್ಯಾಪಾರಿಗಳಲ್ಲಿ ಠೇವಣಿ ಇಡಬೇಕು.
ಕೃಷಿ ರಕ್ಷಣೆಗಾಗಿ ಶಸ್ತ್ರಾಸ್ತ್ರ ಪರವಾನಿಗೆ ಹೊಂದಿದವರು ತಮ್ಮ ಪರವಾನಿಗೆಯಲ್ಲಿ ಹೊಂದಿರುವ ಎಲ್ಲಾ ಶಸ್ತ್ರಾಸ್ತ್ರಗಳನ್ನು ಹತ್ತಿರದ ಪೊಲೀಸ್ ಠಾಣೆಗಳಲ್ಲಿ ಅಥವಾ ನಮೂನೆ ನಂಬ್ರ 8 ರ ಪರವಾನಿಗೆ ಹೊಂದಿರುವ ಅಧಿಕೃತ ಕೋವಿ ಮದ್ದುಗುಂಡು ವ್ಯಾಪಾರಿಗಳಲ್ಲಿ ಮೇ 27 ರೊಳಗೆ ಠೇವಣಿ ಇಡಬೇಕು.ಚುನಾವಣಾ ಫಲಿತಾಂಶ ಘೋಷಣೆಯಾದ ದಿನಾಂಕದಿಂದ ಒಂದು ವಾರದ ನಂತರ (ದಿನಾಂಕ :06-06-2019 ರಿಂದ) ಠೇವಣಿ ಇಡಲಾದ ಪೊಲೀಸ್ ಠಾಣೆ / ಅಧೀಕೃತ ಕೋವಿ ಮತ್ತು ಮದ್ದುಗುಂಡು ಡೀಲರ್ ಗಳಿಂದ ಪರವಾನಿಗೆದಾರರು ಶಸ್ತ್ರಾಸ್ತ್ರಗಳನ್ನು ಮರು ಪಡೆದುಕೊಳ್ಳಬಹುದು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.