(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.21. ಮಂಗಳೂರು ತಾಲೂಕಿನಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯಗಳಾದ ಮುಲ್ಕಿ, ಮೂಡಬಿದ್ರೆ, ಸುಂಕದಕಟ್ಟೆ, ದರೆಗುಡ್ಡೆ ಹಾಗೂ ಬಾಲಕಿಯರ ವಿದ್ಯಾರ್ಥಿನಿಲಯಗಳಾದ ಗುರುಪುರ, ಅಶೋಕನಗರ, ಇಲ್ಲಿಗೆ ಹಿಂದುಳಿದ ವರ್ಗಗಳ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಂದ ನಿಲಯಗಳ ಸೇರ್ಪಡೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನಿಲಯಗಳಲ್ಲಿ 5ನೇ ತರಗತಿಯಿಂದ 10ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅವಕಾಶವಿದ್ದು, ಉಚಿತ ಊಟ, ವಸತಿ ಹಾಗೂ ಇನ್ನಿತರ ಸೌಲಭ್ಯಗಳನ್ನು ನೀಡಲಾಗುವುದು.
ಅರ್ಜಿಗಳನ್ನು ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳ ಕಚೇರಿ, ಉರ್ವಸ್ಟೋರ್, ರೇಡಿಯೋ ಪಾರ್ಕ್, ಮಂಗಳೂರು ಅಥವಾ ಸಂಬಂಧಿಸಿದ ವಿದ್ಯಾರ್ಥಿನಿಲಯಗಳಿಂದ ಪಡೆದುಕೊಳ್ಳಬಹುದು. ಅರ್ಜಿಯೊಂದಿಗೆ ತಹಶೀಲ್ದಾರರಿಂದ ಪಡೆದ ಜಾತಿ/ಆದಾಯ ಪ್ರಮಾಣ ಪತ್ರ, ಅಂಕಪಟ್ಟಿ, ಆಧಾರ್ ಕಾರ್ಡ್, ಪೋಟೋ ಇತ್ಯಾದಿ ನಕಲನ್ನು ಲಗತ್ತಿಸಬೇಕು. ಕಚೇರಿಗೆ ಅಥವಾ ನಿಲಯಗಳಿಗೆ ಅರ್ಜಿ ಸಲ್ಲಿಸಲು ಜೂನ್ 5 ಕೊನೆಯ ದಿನ ಆಗಿದೆ.ಹೆಚ್ಚಿನ ಮಾಹಿತಿಗೆ ಕಚೇರಿ ದೂರವಾಣಿ ಸಂಖ್ಯೆ : 0824-2453650 ಸಂಪರ್ಕಿಸಲು ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.