ಇಂದು ಉಪರಾಷ್ಟ್ರಪತಿ ಚುನಾವಣೆ: ಸಂಜೆ ವೇಳೆಗೆ ಫಲಿತಾಂಶ ಪ್ರಕಟ

(ನ್ಯೂಸ್ ಕಡಬ) newskadaba.com ನವದೆಹಲಿ, ಆ.05. ಭಾರತದ ಹಾಲಿ ಉಪರಾಷ್ಟ್ರಪತಿ ಹಮಿದ್ ಅನ್ಸಾರಿ ಅವರ ಅಧಿಕಾರಾವಧಿ ಆಗಸ್ಟ್ 10 ರಂದು ಮುಗಿಯಲಿರುವುದರಿಂದ ಉಪರಾಷ್ಟ್ರಪತಿ ಚುನಾವಣೆಗೆ ಇಂದು ಬೆಳಿಗ್ಗೆಯಿಂದ ಮತದಾನ ಆರಂಭವಾಗಿದೆ.

ಬೆಳಿಗ್ಗೆ 10 ಗಂಟೆಯಿಂದ 5 ಗಂಟೆಯವರೆಗೆ ಮತದಾನ ನಡೆಯಲಿದ್ದು, ಎನ್ ಡಿಎ ಬೆಂಬಲಿತ ಬಿಜೆಪಿ ಅಭ್ಯರ್ಥಿ ವೆಂಕಯ್ಯ ನಾಯ್ಡು ಹಾಗೂ ಯುಪಿಎ ಬೆಂಬಲಿತ ಕಾಂಗ್ರೆಸ್ ಅಭ್ಯರ್ಥಿ ಗೋಪಾಲಕೃಷ್ಣ ಗಾಂಧಿ ನಡುವೆ ನೇರ ಹಣಾಹಣಿ ನಡೆಯಲಿದೆ. ಇಂದು ಸಂಜೆ 7 ಗಂಟೆಯ ಹೊತ್ತಿಗೆ ಫಲಿತಾಂಶ ಪ್ರಕಟವಾಗಲಿದೆ.

error: Content is protected !!

Join the Group

Join WhatsApp Group