(ನ್ಯೂಸ್ ಕಡಬ) newskadaba.com ಗೋಪಾಲ್ ಪೋರಾ,ಮೇ.22.ಬುಧವಾರ ಬೆಳಗ್ಗೆ ಭದ್ರತಾ ಪಡೆಯ ಎನ್ ಕೌಂಟರ್ ಗೆ ಇಬ್ಬರು ಉಗ್ರರು ಬಲಿಯಾಗಿರುವ ಘಟನೆ ಜಮ್ಮು-ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಗೋಪಾಲ್ ಪೋರಾ ಪ್ರದೇಶದಲ್ಲಿ ನಡೆದಿದೆ.ಗೋಪಾಲ್ ಪೋರಾ ಗ್ರಾಮದಲ್ಲಿ ಉಗ್ರರು ಅಡಗಿದ್ದಾರೆಂಬ ಮಾಹಿತಿ ಮೇರೆಗೆ ಭದ್ರತಾಪಡೆ ಹಾಗೂ ಪೊಲೀಸರ ಜಂಟಿ ಕಾರ್ಯಾಚರಣೆ ನಡೆಸಿದ್ದರು.

ಈ ವೇಳೆ ಭಯೋತ್ಪಾದಕರು ಭದ್ರತಾಪಡೆ ಮೇಲೆ ಗುಂಡಿನ ದಾಳಿ ನಡೆಸಿದಾಗ ಪ್ರತಿಯಾಗಿ ನಡೆಸಿದ ಎನ್ ಕೌಂಟರ್ ಗೆ ಇಬ್ಬರು ಉಗ್ರರು ಹತರಾಗಿರುವುದಾಗಿ ವರದಿ ತಿಳಿಸಿದೆ.ಬಲಿಯಾಗಿರುವ ಉಗ್ರರನ್ನು ಇನ್ನಷ್ಟೇ ಗುರುತಿಸಬೇಕಾಗಿದೆ. ಇಬ್ಬರೂ ಹಿಜ್ ಬುಲ್ ಮುಜಾಹಿದೀನ್ ಸಂಘಟನೆಗೆ ಸೇರಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಕುಲ್ಗಾಮ್ ಮತ್ತು ಶೋಪಿಯಾನ್ ಪ್ರದೇಶಗಳಲ್ಲಿ ಮೊಬೈಲ್, ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ವರದಿ ವಿವರಿಸಿದೆ.
