(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.23.ವಿಮಾನ ದುರಂತದಲ್ಲಿ ಮೃತಪಟ್ಟವರ ಸ್ಮರಣಾರ್ಥ ಕುಟುಂಬದವರಂತೆ ಪ್ರತಿ ವರ್ಷ ನಾವೆಲ್ಲರೂ ಶ್ರದ್ಧಾಂಜಲಿ ಅರ್ಪಿಸುತ್ತಿದ್ದು, ಈ ದುರಂತ ನಮಗೊಂದು ಪಾಠವಾಗಿದೆ ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಹೇಳಿದರು. ಅವರಿಂದು ಕೂಳೂರು ತಣ್ಣೀರು ಬಾವಿ ಸಮೀಪ ಮಂಗಳೂರು ವಿಮಾನ ದುರಂತದಲ್ಲಿ ಮೃತಪಟ್ಟವರ ನೆನಪಿಗಾಗಿ ನಿರ್ಮಾಣ ಮಾಡಿರುವ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು. ದುರಂತ ಸಂಭವಿಸಿ ಇಂದಿಗೆ 9 ವರ್ಷಗಳು ಸಂದಿವೆ.
ದುರ್ಘಟನೆಯ ವೇಳೆ ಮಂಗಳೂರಿಗರು ಒಂದಾಗಿ ನಿಂತು ನೀಡಿದ ಸಹಕಾರವನ್ನು ಈ ಸಂದರ್ಭದಲ್ಲಿ ಸ್ಮರಿಸಿದರು. ವಿಮಾನ ದುರಂತ ಸಂತ್ರಸ್ತರ ಸಂಘದ ಅಧ್ಯಕ್ಷ ಮಹಮ್ಮದ್ ಬ್ಯಾರಿ ಮಾತನಾಡಿದರು. ಈ ಸಂದರ್ಭ ಜಿಲ್ಲಾ ಪಂಚಾಯತಿ ಸಿಇಒ ಡಾ ಸೆಲ್ವಮಣಿ ಆರ್, ಅಪರ ಜಿಲ್ಲಾಧಿಕಾರಿ ವೆಂಕಟಾಚಲಪತಿ, ಪಣಂಬೂರು ಎಸಿಪಿ ಶ್ರೀನಿವಾಸ ಗೌಡ, ಡಿಸಿಪಿ ನಟರಾಜ್, ಎಸಿ ರವಿಚಂದ್ರನಾಯಕ್, ಡಿಡಿ ಎಲ್ ಆರ್ ಪ್ರಸಾದಿನಿ, ತಹಸೀಲ್ದಾರ್ ಗುರುಪ್ರಸಾದ್,ಮಂಗಳೂರು ವಿಮಾನ ನಿಲ್ದಾಣ ನಿರ್ದೇಶಕ ವಿ ವಿ ರಾವ್, ವಿವಿಧ ಇಲಾಖೆ ಅಧಿಕಾರಿಗಳು ಪಾಲ್ಗೊಂಡರು.