ಸಂಧ್ಯಾ ಕಾಲೇಜಿನಲ್ಲಿ ಬಿ.ಎ. (HEJ), ಬಿ.ಕಾಂ., ಬಿ.ಸಿ.ಎ. ತರಗತಿಗಳಿಗೆ ಪ್ರಥಮ ವರ್ಷದ ಪ್ರವೇಶಾತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.23.ಮಂಗಳೂರು ವಿಶ್ವವಿದ್ಯಾನಿಲಯದ ಅಧೀನದಲ್ಲಿರುವ ಸುಮಾರು 150 ವರ್ಷಗಳ ಇತಿಹಾಸವಿರುವ ವಿಶ್ವವಿದ್ಯಾನಿಲಯ ಕಾಲೇಜಿನ ಆವರಣದಲ್ಲಿ 2015ನೇ ಸಾಲಿನಿಂದ ಸ್ಥಾಪನೆಗೊಂಡ ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜಿನಲ್ಲಿ ಬಿ.ಎ. (HEJ), ಬಿ.ಕಾಂ., ಬಿ.ಸಿ.ಎ. ತರಗತಿಗಳಿಗೆ ಪ್ರಥಮ ವರ್ಷದ ಪ್ರವೇಶಾತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹಗಲು ಹೊತ್ತಿನಲ್ಲಿ ಚಾರ್ಟರ್ಡ್ ಅಕೌಂಟೆನ್ಸಿ (CA Foundation Course/ ICS / ACS) ಕೋರ್ಸುಗಳನ್ನು ವ್ಯಾಸಂಗ ಮಾಡುತ್ತಿರುವ, ಆರ್ಥಿಕವಾಗಿ ಹಿಂದುಳಿದ, ಹಗಲು ಹೊತ್ತಿನಲ್ಲಿ ಕೆಲಸ ನಿರ್ವಹಿಸಿ ಪದವಿ ಪಡೆಯಲು ಇಚ್ಛಿಸುವ ವಿದ್ಯಾರ್ಥಿಗಳು ವಿದ್ಯಾರ್ಥಿಗಳು ಈ ಕಾಲೇಜಿನಲ್ಲಿ ಪದವಿ ವ್ಯಾಸಂಗವನ್ನು ಮಾಡಬಹುದಾಗಿದೆ.

ಮಂಗಳೂರು ವಿಶ್ವವಿದ್ಯಾನಿಲಯವು ನಿಗದಿ ಪಡಿಸಿದ ಕನಿಷ್ಟ ಶುಲ್ಕ ಹಾಗೂ ಇತರ ಸೌಕರ್ಯಗಳಾದ ಸುಸಜ್ಜಿತ ಗ್ರಂಥಾಲಯ, ಅನುಭವಿ ಶಿಕ್ಷಕರು, ಕಂಪ್ಯೂಟರ್ ಲ್ಯಾಬ್ ಹಾಗೂ ಸೈಬರ್ ಲ್ಯಾಬ್‍ಗಳಿದ್ದು ಶೈಕ್ಷಣಿಕ ವರ್ಷದಲ್ಲಿ ಪಠ್ಯ ಚಟುವಟಿಕೆಗಳೊಂದಿಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು, ಸಂಪನ್ಮೂಲ ವ್ಯಕ್ತಿಗಳಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮಗಳು, ವ್ಯಕ್ತಿತ್ವ ವಿಕಸನಕ್ಕೆ ಸಂಬಂಧಪಟ್ಟ ಕಾರ್ಯಕ್ರಮಗಳನ್ನು ನಡೆಸುವುದು.

Also Read  ಮಂಗಳೂರು: ವಿಮಾನ ದುರಂತಕ್ಕೆ ಸಂದಿತು 9 ವರುಷ ➤ ಜಗತ್ತನ್ನೇ ಬೆಚ್ಚಿ ಬೀಳಿಸಿದ ಕರಾವಳಿಯ ಭೀಕರ ದುರಂತ

ಕಾಲೇಜಿನಲ್ಲಿ ನೀಡಲಾಗುವ ಈ ಸೌಲಭ್ಯಗಳನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಂಡು ಪದವಿ ವ್ಯಾಸಂಗ ಪೂರ್ಣಗೊಳಿಸಬಹುದಾಗಿದೆ. ವಿದ್ಯಾರ್ಥಿಗಳು ಕಲಿಕೆಯೊಂದಿಗೆ ಸರಕಾರದ ವಿವಿಧ ಇಲಾಖೆಗಳಿಂದ ನೀಡಲಾಗುವ ಸ್ಕಾಲರ್‍ಶಿಪ್ ಸೌಲಭ್ಯಗಳನ್ನು ಪಡೆಯಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾನಿಲಯ ಕಾಲೇಜು, ಹಂಪನಕಟ್ಟೆ ಇದರ ಆವರಣದಲ್ಲಿರುವ ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು ಕಚೇರಿಯನ್ನು ಸಂಪರ್ಕಿಸಬಹುದು ಅಥವಾ ದೂರವಾಣಿ ಸಂಖ್ಯೆ 0824-2424608ರಲ್ಲಿ ಸಂಪರ್ಕಿಸಬಹುದು.

Also Read  ಏಮ್ಸ್ ಪ್ರಥಮ ದರ್ಜೆ ಕಾಲೇಜು ಕಡಬ ► ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

error: Content is protected !!
Scroll to Top