2019 ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಮತ ಬೇಟೆಯಾಡಿದ ಬಿಜೆಪಿ ➤ ಕಡಬದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.23. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಮೂರನೇ ಬಾರಿಗೆ ಭರ್ಜರಿ ಗೆಲುವು ಸಾಧಿಸಿದ್ದು ಹಾಗೂ ಕೇಂದ್ರದಲ್ಲಿ ಎರಡನೇ ಬಾರಿಗೆ ಮೋದಿ‌ ಸರಕಾರವು ಬಹುಮತ ಗಳಿಸಿರುವ ಹಿನ್ನೆಲೆಯಲ್ಲಿ ಕಡಬದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿತಿಂಡಿ ಹಂಚಿ ಸಂಭ್ರಮಿಸಿದರು.

ಕಡಬ ಪೇಟೆಯ ಹೃದಯ ಭಾಗದಿಂದ ಆರಂಭಗೊಂಡ ಮೆರವಣಿಗೆಯು ಅನುಗ್ರಹ ಸಭಾಭವನದವರೆಗೆ ತೆರಳಿ ಬಸ್ ನಿಲ್ದಾಣದ ವರೆಗೆ ನಡೆಯಿತು. ಆ ಬಳಿಕ ಹಲವು ಕಾರ್ಯಕರ್ತರು ವಾಹನಗಳ ಮೂಲಕ ಗ್ರಾಮ ಗ್ರಾಮಗಳಿಗೆ ತೆರಳಿ ಸಂಭ್ರಮಾಚರಿಸಿದರು.

Also Read  ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಪ್ರಕಟ

error: Content is protected !!
Scroll to Top