ಕೋಚಿಂಗ್ ಸೆಂಟರ್ ನಲ್ಲಿ ಕಾಣಿಸಿಕೊಂಡ ಬೆಂಕಿ ➤ ಜೀವ ಭಯದಲ್ಲಿ ನಾಲ್ಕನೇ ಮಹಡಿಯಿಂದ ಕೆಳಕ್ಕೆ ಜಿಗಿದ ವಿದ್ಯಾರ್ಥಿಗಳು ➤ 18 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮೃತ್ಯು, ಹಲವರು ಗಂಭೀರ

(ನ್ಯೂಸ್ ಕಡಬ) newskadaba.com ಗುಜರಾತ್, ಮೇ.24. ಇಲ್ಲಿನ ಕೋಚಿಂಗ್ ಸೆಂಟರ್ ಒಂದರಲ್ಲಿ ಬೆಂಕಿ ಅನಾಹುತ ಸಂಭವಿಸಿದ ಪರಿಣಾಮ 18 ವಿದ್ಯಾರ್ಥಿಗಳು ಮೃತಪಟ್ಟು, ಹಲವರು ಗಂಭೀರ ಗಾಯಗೊಂಡ ಘಟನೆ ಶುಕ್ರವಾರದಂದು ನಡೆದಿದೆ.

ನಾಲ್ಕು ಮಹಡಿಗಳ ಕಟ್ಟಡದ ಮೇಲಿನ ಮಹಡಿಯಲ್ಲಿ ತರಗತಿ ನಡೆಯುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ದಟ್ಟ ಹೊಗೆಯೊಂದಿಗೆ ಬೆಂಕಿಯ ಕೆನ್ನಾಲಿಗೆ ಜೋರಾಗುತ್ತಿರುವುದನ್ನು ನೋಡಿ ಗಾಬರಿಯಾದ ವಿದ್ಯಾರ್ಥಿಗಳು ಜೀವ ಭಯದಿಂದ ಕಟ್ಟಡದ ಕಿಟಕಿಗಳಿಂದ ಕೆಳಕ್ಕೆ ಜಿಗಿದಿದ್ದಾರೆ. ಇದರಿಂದಾಗಿ 18 ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಮೃತಪಟ್ಟಿದ್ದು, ಹಲವರು ಗಂಭೀರ ಗಾಯಗೊಂಡಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿ ಬೆಂಕಿಯನ್ನು ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ವಿದ್ಯಾರ್ಥಿಗಳು ಕಟ್ಟಡದಿಂದ ಜಿಗಿಯುವ ದೃಶ್ಯ ಇದೀಗ ವೈರಲ್ ಆಗಿದೆ.

Also Read  ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನ

https://youtu.be/vODv0DnCYGE

error: Content is protected !!
Scroll to Top