ಕದ್ರಿ ಪಾರ್ಕ್‍ನಲ್ಲಿ ಮಾವು ಮೇಳ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.25.ದಕ್ಷಿಣ ಕನ್ನಡ ಜಿಲ್ಲೆ ತೋಟಗಾರಿಕೆ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಾವು ಅಭಿವೃದ್ದಿ ಮತ್ತು ಮಾರುಕಟ್ಟೆ (ನಿ.), ಬೆಂಗಳೂರುರವರ ಸಹಯೋಗದಲ್ಲಿ ಮಾವು ಬೆಳೆಗಾರರಿಂದ ನೇರವಾಗಿ ಬಳಕೆದಾರರಿಗೆ ಮಾರಾಟ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಮೇ 24 ರಿಂದ 26 ರವರೆಗೆ ಕದ್ರಿ ಉದ್ಯಾನವನ ಮಂಗಳೂರಿನಲ್ಲಿ ಮಾವು ಮೇಳ ಆಯೋಜಿಸಲಾಗಿದೆ.

ಇಲ್ಲಿ ರೈತರಿಂದ ನೇರವಾಗಿ ಗ್ರಾಹಕರಿಗೆ ಕಾರ್ಬೈಡ್ ಮುಕ್ತ, ನೈಸರ್ಗಿಕವಾಗಿ ಮಾಗಿಸಿದ ಮಾವು ಮಾರಾಟ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತಿದೆ. ಮಾವು ಪ್ರಿಯರಿಗೆ ವಿವಿಧ ಮಾವು ತಳಿಗಳನ್ನು ಬೆಳೆಯುವ ಜಿಲ್ಲೆಗಳಾದ ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ ಮುಂತಾದ ಜಿಲ್ಲೆಗಳಿಂದ ರೈತರು ನೇರವಾಗಿ ಮಾರಾಟ ಮಾಡಲು ಮಾವು ಮೇಳದಲ್ಲಿ ಮಾರಾಟ ಕಲ್ಪಿಸಲಾಗಿದೆ. ಉತ್ತಮ ಗುಣಮಟ್ಟದ ಹಾಗೂ ರುಚಿಕರವಾದ ಮಾವು ಹಣ್ಣುಗಳನ್ನು ನೇರವಾಗಿ ರೈತರಿಂದ ಗ್ರಾಹರಿಗೆ ದೊರೆಯುವ ವ್ಯವಸ್ಥೆ ಮಾಡಲಾಗಿದೆ ಎಂದು ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಡಾ ಎಚ್ ಆರ್ ನಾಯಕ್ ತಿಳಿಸಿದ್ದಾರೆ.

Also Read  ನರ ಬಲಿ ಹೆಸರಲ್ಲಿ ತಮ್ಮ ತಲೆಯನ್ನೇ ಕತ್ತರಿಸಿಕೊಂಡ ದಂಪತಿ

error: Content is protected !!
Scroll to Top