ಸವಿತಾ ಸಮಾಜ ವಿದ್ಯಾರ್ಥಿಗಳಿಗೆ ಉಚಿತ ತರಬೇತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.25.2019-20ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಸವಿತಾ ಸಮಾಜದ ವಿದ್ಯಾರ್ಥಿಗಳಿಗೆ ಪಾರಂಪರಿಕ ಕಲೆಗಳಾದ ಡೋಲು ಮತ್ತು ನಾದಸ್ವರ ಸಂಗೀತ ಕಲೆಗಳಲ್ಲಿ 4 ವರ್ಷದ ತರಬೇತಿಯನ್ನು ಉಚಿತ ಊಟ, ವಸತಿ, ಶಿಕ್ಷಣ ಮತ್ತು ತರಬೇತಿ ಭತ್ಯೆಯೊಂದಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ನೀಡಲಾಗುವುದು.

ಸವಿತಾ ಸಮಾಜದ ಆಸಕ್ತ ವಿದ್ಯಾರ್ಥಿಗಳು ಅರ್ಜಿ ನಮೂನೆಯನ್ನು ಆಯಾ ಜಿಲ್ಲೆಯ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯಿಂದ ಪಡೆದು ಭರ್ತಿ ಮಾಡಿ ಜೂನ್ 4 ರೊಳಗೆ ಆಯಾ ಜಿಲ್ಲೆಯ ಜಿಲ್ಲಾ ಹಿಂದುಳಿದ ವರ್ಗಗಳ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‍ಸೈಟ್ www.backwardclasses.kar.nic.in ನ್ನು ಸಂಪರ್ಕಿಸಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Also Read  ಕಡಬ ಸಿಇಒ ಅವರಿಂದ ಕೊಂಬಾರು ಬಸ್ ನಿಲ್ದಾಣದಲ್ಲಿರುವ ಪುಸ್ತಕದ ಗೂಡಿಗೆ ಚಾಲನೆ

error: Content is protected !!
Scroll to Top