ಕೊಯಿಲ: ನೇಣು ಬಿಗಿದು ಮಹಿಳೆ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ಮೇ.24. ಮಾನಸಿಕವಾಗಿ ಅಸ್ವಸ್ಥಳಾಗಿದ್ದ ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಠಾಣಾ ವ್ಯಾಪ್ತಿಯ ರಾಮಕುಂಜ ಗ್ರಾಮದ ಅರ್ಬಿ ಎಂಬಲ್ಲಿ ಶುಕ್ರವಾರ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಅರ್ಬಿ ಸುರೇಶ ಎಂಬವರ ಪತ್ನಿ ನೇತ್ರಾವತಿ(32) ಎಂದು ಗುರುತಿಸಲಾಗಿದೆ. ಸುರೇಶ್ ಅವರು ಸುಮಾರು ಹತ್ತು ತಿಂಗಳ ಹಿಂದೆ ಮದುವೆಯಾಗಿದ್ದು, ಮದುವೆಯಾದ ಆರಂಭದಿಂದಲೇ ಮಾನಸಿಕವಾಗಿ ಖಿನ್ನತೆಯಿಂದ ಇದ್ದ ಮೃತ ಮಹಿಳೆ ಇತ್ತೀಚೆಗೆ ತೀವ್ರವಾಗಿ ನೊಂದಿದ್ದರು. ಇದೇ ಕಾರಣಕ್ಕೆ ಮನೆಯ ಪಕ್ಕದ ಕೊಟ್ಟಿಗೆಯಲ್ಲಿ ಶುಕ್ರವಾರ ಮಧ್ಯಾಹ್ನದ ವೇಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಕಡಬ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Scroll to Top