ಲೋಕಸಭಾ ಚುನಾವಣೆ ಅವಧಿಯಲ್ಲಿ ಅಮಾನತು ಗೊಳಿಸಲಾದ ಶಸ್ತ್ರಾಸ್ತ್ರಗಳ ತಾತ್ಕಾಲಿಕ ಅವಧಿ ಮುಂದುಡುವಂತೆ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.25. ಲೋಕಸಭಾ ಚುನಾವಣೆ-2019ರ ಪ್ರಯುಕ್ತ ಮಂಗಳೂರು ಪೊಲೀಸು ಕಮಿಷನರೇಟ್ ವ್ಯಾಪ್ತಿಯಲ್ಲಿ ಆತ್ಮ ರಕ್ಷಣೆಗಾಗಿ ಮಂಜೂರು ಮಾಡಲಾಗಿರುವ ಎಲ್ಲಾ ಆಯುಧ ಪರವಾನಿಗೆಗಳನ್ನು ಭಾರತೀಯ ಶಸ್ತ್ರಾಸ್ತ್ರ ಕಾಯ್ದೆ-1959 ಕಲಂ 17(3)(ಬಿ) ರನ್ವಯ 2019ನೇ ಮಾರ್ಚ್ 11 ರಿಂದ ಮೇ 31 ರವರೆಗೆ ತಾತ್ಕಾಲಿಕ ಅವಧಿಗೆ ಅಮಾನತಿನಲ್ಲಿರಿಸಿ ಆದೇಶಿಸಲಾಗಿದೆ.

ಪ್ರಸ್ತುತ ಮೂಡಬಿದ್ರೆ ಪುರಸಭೆ ಹಾಗೂ ಮುಲ್ಕಿ ಪಟ್ಟಣ ಪಂಚಾಯತ್‍ನ ಚುನಾವಣೆಯ ಅವಧಿಯಲ್ಲಿ ಸಾರ್ವಜನಿಕ ಶಾಂತಿ ಸುವ್ಯವಸ್ಥೆ ಮತ್ತು ಸಾರ್ವಜನಿಕ ಸುರಕ್ಷತೆ ಕಾಪಾಡುವ ದೃಷ್ಟಿಯಿಂದ ಜೂನ್ 6 ರ ವರೆಗೆ ಮಂಗಳೂರು ಕಮೀಷನರೇಟ್ ವ್ಯಾಪ್ತಿಯ ಪ್ರದೇಶಗಳಲ್ಲಿ ಅಮಾನತಿನ ಅವಧಿಯನ್ನು ವಿಸ್ತರಿಸಿ ಮಂಗಳೂರು ನಗರ ಪೊಲೀಸು ಆಯುಕ್ತರಾದ ಸಂದೀಪ್ ಪಾಟೀಲ್ ಆದೇಶಿಸಿರುತ್ತಾರೆ.

Also Read  ಕಟ್ಟಡ ಕುಸಿತ ಅವಘಡ: ಮೃತರ ಸಂಖ್ಯೆ 5ಕ್ಕೆ ಏರಿಕೆ

error: Content is protected !!
Scroll to Top