ಗಡಿಯಾರ: ನಿಂತಿದ್ದ ರಿಕ್ಷಾಕ್ಕೆ ಹಿಂದಿನಿಂದ ಕಾರು ಢಿಕ್ಕಿ ➤ ಮೂವರಿಗೆ ಗಾಯ

(ನ್ಯೂಸ್ ಕಡಬ) newskadaba.com ಮಾಣಿ, ಮೇ.25. ನಿಲ್ಲಿಸಿದ್ದ ರಿಕ್ಷಾಕ್ಕೆ ಹಿಂದಿನಿಂದ ಕಾರು ಢಿಕ್ಕಿ ಹೊಡೆದ ಪರಿಣಾಮ ಓರ್ವ ಗಂಭೀರ ಗಾಯಗೊಂಡು, ಇಬ್ಬರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾದ ಘಟನೆ ಶನಿವಾರದಂದು ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗಡಿಯಾರದಲ್ಲಿ ಸಂಭವಿಸಿದೆ.

ಉಪ್ಪಿನಂಗಡಿ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಟೊಯೋಟಾ ಎಟಿಯೋಸ್ ಕಾರು ರಸ್ತೆಯಲ್ಲಿ ನಿಲ್ಲಿಸಿದ್ದ ರಿಕ್ಷಾಕ್ಕೆ ಢಿಕ್ಕಿ ಹೊಡೆದಿದೆ. ಪರಿಣಾಮ ರಿಕ್ಷಾ ಚಾಲಕ ಆಪತ್ಬಾಂಧವ ಗಡಿಯಾರ ಪುತ್ತಾಕ, ಗಡಿಯಾರ ನಿವಾಸಿಗಳಾದ ಪದ್ಮಾವತಿ ಹಾಗೂ ಕಾವ್ಯ ಗಾಯಗೊಂಡಿದ್ದು, ತುಂಬೆ ಆಸ್ಪತ್ರೆಗೆ ದಾಖಲಿಸಲಾಗಿದೆ.

Also Read  ಸುಳ್ಯ: 25ನೇ ಕನ್ನಡ ಸಾಹಿತ್ಯ ಸಮ್ಮೇಳನ

error: Content is protected !!
Scroll to Top