ಮಾಣಿ: ಕೆಎಸ್ಸಾರ್ಟಿಸಿ ಬಸ್ – ಬುಲೆಟ್ ನಡುವೆ ಢಿಕ್ಕಿ ➤ ಬುಲೆಟ್ ಸವಾರ ಕಡಬ ನಿವಾಸಿ ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಮೇ.25. ಕೆಎಸ್ಸಾರ್ಟಿಸಿ ಬಸ್ ಹಾಗೂ ಬುಲ್ಲೆಟ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬುಲ್ಲೆಟ್ ಸವಾರ ಗಂಭೀರ ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿಯಲ್ಲಿ ಶನಿವಾರ ಸಂಜೆ ಸಂಭವಿಸಿದೆ.

ಗಾಯಗೊಂಡ ಬುಲ್ಲೆಟ್ ಸವಾರ‌ನನ್ನು ಕಡಬ ತಾಲೂಕಿನ ನೆಟ್ಟಣ ನಿವಾಸಿ ಸಂಜಿತ್ ಸದಾನಂದನ್ ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಕಡಬ ಕಡೆಗೆ ತೆರಳುತ್ತಿದ್ದ ಬುಲೆಟ್ ಹಾಗೂ ಮಂಗಳೂರು ಕಡೆಗೆ ತೆರಳುತ್ತಿದ್ದ ಬೈಕ್ ನಡುವೆ ಬುಡೋಳಿ ಸಮೀಪದ ಬೊಳ್ಳುಕಳ್ಳು ಎಂಬಲ್ಲಿ ಢಿಕ್ಕಿ ಸಂಭವಿಸಿದೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Also Read  ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಸ್ಪೀಕರ್ ಸ್ಥಾನಕ್ಕೆ ಆಯ್ಕೆ

error: Content is protected !!