ನಾಳೆ (ಮೇ.26) ಕಡಬದಲ್ಲಿ ಸಾರ್ವಜನಿಕ ಬೃಹತ್ ರಕ್ತದಾನ ಶಿಬಿರ

(ನ್ಯೂಸ್ ಕಡಬ) newskadaba.com ಕಡಬ, ಮೇ.25. ಕಡಬ ಸೈಂಟ್ ಜೋಕಿಮ್ಸ್ ಚರ್ಚ್ ನ ಇಂಡಿಯನ್ ಕ್ಯಾಥೊಲಿಕ್ ಯೂತ್ ಮೂವ್ ಮೆಂಟ್ ಘಟಕ ಹಾಗೂ ಐಸಿವೈಎಂ ಪುತ್ತೂರು ಪೂರ್ವ ವಿಭಾಗದ ಆಶ್ರಯದಲ್ಲಿ ಮಂಗಳೂರಿನ ಎ.ಜೆ. ಆಸ್ಪತ್ರೆಯ ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರವು ನಾಳೆ (ಮೇ.26) ಕಡಬದಲ್ಲಿ ನಡೆಯಲಿದೆ.

ಭಾನುವಾರ ಬೆಳಿಗ್ಗೆ 10 ಗಂಟೆಯಿಂದ ಕಡಬದ ಸೈಂಟ್ ಜೋಕಿಮ್ಸ್ ಚರ್ಚ್‌ನ ಸಭಾಂಗಣದಲ್ಲಿ ಆರಂಭಗೊಂಡು ಮಧ್ಯಾಹ್ನದ ವರೆಗೆ ರಕ್ತದಾನ ಶಿಬಿರ ನಡೆಯಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರಕ್ತದಾನ ಮಾಡಬೇಕಾಗಿ ಸಂಸ್ಥೆಯ ಪ್ರಕಟಣೆಯಲ್ಲಿ ಕೋರಿದ್ದಾರೆ.

error: Content is protected !!
Scroll to Top