ಬಿಜೆಪಿ ಶಾಸಕಾಂಗ ಪಕ್ಷದ ಸಭೆ

 

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.27.  ಜೂ.1ರಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯುವ ಸಾಧ್ಯತೆಯಿದೆ.ಈ ಮಧ್ಯೆ, ಲೋಕಸಭಾ ಚುನಾವಣೆ ಫ‌ಲಿತಾಂಶದ ವಿಚಾರದಲ್ಲಿ ಮೈತ್ರಿ ಪಕ್ಷಗಳ ನಿಲುವು ಆಧರಿಸಿ ಮುಂದಿನ ಹೆಜ್ಜೆ ಇಡುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹೇಳಿದ್ದರೂ ಕಾಂಗ್ರೆಸ್‌ ಶಾಸಕರು ಎಸ್‌.ಎಂ.ಕೃಷ್ಣ ಅವರನ್ನು ಭೇಟಿ ಮಾಡಿರುವುದು ಕುತೂ ಹಲ ಮೂಡಿಸಿದೆ.

ಪ್ರಧಾನಿ ಮೋದಿ ಅವರ ಪ್ರಮಾಣ ವಚನ ಸಮಾರಂಭ ಮುಗಿದ ನಂತರ ರಾಜ್ಯದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆದು, ಪ್ರಸಕ್ತ ವಿದ್ಯಮಾನಗಳ ಬಗ್ಗೆ ಚರ್ಚಿಸಲು ನಿರ್ಧರಿಸಲಾಗಿದೆ ಎಂದು ಹೇಳಲಾಗಿದೆ.

Also Read  ಕಡಬದ ಆಹಾರ ನಿರೀಕ್ಷಕ ಚಂದ್ರ ನಾಯ್ಕ್ ಕಂದಾಯ ನಿರೀಕ್ಷಕರಾಗಿ ಪಂಜಕ್ಕೆ ವರ್ಗಾವಣೆ !

error: Content is protected !!
Scroll to Top