ಯುವ ಕಾಂಗ್ರೆಸ್ ಮುಖಂಡ ಮಿಥುನ್ ರೈಗೆ ಜೀವ ಬೆದರಿಕೆ ➤ ಮೂವರು ಭಜರಂಗದಳದ ಕಾರ್ಯಕರ್ತರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.27. ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್‌ ಅಧ್ಯಕ್ಷ, ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಮಿಥುನ್ ರೈಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಕೊಲೆ ಬೆದರಿಕೆ ಒಡ್ಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಭಜರಂಗದಳದ ಕಾರ್ಯಕರ್ತರನ್ನು ಪೊಲೀಸರು ಸೋಮವಾರದಂದು ಬಂಧಿಸಿದ್ದಾರೆ.

ಬಂಧಿತರನ್ನು ಬಂಟ್ವಾಳದ ನಿವಾಸಿಗಳಾದ ಸಚಿನ್ (25), ನಿಶಾಂತ್ (23) ಹಾಗೂ ಕಾಸರಗೋಡು ನಿವಾಸಿ ಕಾರ್ತಿಕ್ (30) ಎಂದು ಗುರುತಿಸಲಾಗಿದೆ. ಆರೋಪಿಗಳು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲು ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಬಡಕಬೈಲ್ ಜಂಕ್ಷನ್‌ನಲ್ಲಿ ಮೇ 23ರಂದು ರಾತ್ರಿ ವಿಜಯೋತ್ಸವದ ವೇಳೆ ಮಿಥುನ್ ರೈ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದಲ್ಲದೆ, ಕೊಲೆ ಬೆದರಿಕೆಯನ್ನು ಒಡ್ಡಿದ್ದರು.

Also Read  ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರಗೈದು ಕೊಲೆ ಮಾಡಿದ್ದ ಆರೋಪಿಗೆ ಮರಣದಂಡನೆ..!


ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳನ್ನು ಬಂಧಿಸಿರುವ ಬಂಟ್ವಾಳ ಗ್ರಾಮಾಂತರ ಪೊಲೀಸರು 143, 144, 504, 506, 505(1)(C), 153A, 149 ಐಪಿಸಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಮುಂದುವರಿಸಿದ್ದಾರೆ.

error: Content is protected !!
Scroll to Top