ಮಹಿಳಾ ಬೀದಿ ನಾಟಕ, ಸಂಗೀತ ಕಲಾ ತಂಡಗಳಿಂದ ಅರ್ಜಿ ಆಹ್ವಾನ

ನ್ಯೂಸ್ ಕಡಬ) newskadaba.com ಮಂಗಳೂರು, ಮೇ.28.ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ 2019-20ನೇ ಸಾಲಿನಲ್ಲಿ ಸರ್ಕಾರದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ವಿಷಯಾಧಾರಿತ ಬೀದಿನಾಟಕ ಹಾಗೂ ಸಂಗೀತ ಕಾರ್ಯಕ್ರಮಗಳನ್ನು ಪ್ರದರ್ಶಿಸಲು ಮಹಿಳಾ ಕಲಾ ತಂಡಗಳಿಂದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಅರ್ಜಿ ಆಹ್ವಾನಿಸಿದೆ.


ಅರ್ಜಿ ಸಲ್ಲಿಸುವ ಕಲಾ ತಂಡಗಳು ಬೀದಿನಾಟಕ ಪ್ರದರ್ಶನದಲ್ಲಿ ಅನುಭವ ಹೊಂದಿರಬೇಕು. ಅಭಿನಯ, ಹಾಡು, ಸಂಗೀತ, ನಿರೂಪಣೆ ಸಾಮಥ್ರ್ಯ ಹೊಂದಿರಬೇಕು. ಒಂದು ಬೀದಿನಾಟಕ ತಂಡದಲ್ಲಿ ಕಡ್ಡಾಯವಾಗಿ ಎಂಟು ಜನ ಮಹಿಳಾ ಕಲಾವಿದರಿರಬೇಕು. ತಂಡದಲ್ಲಿ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ವರ್ಗದ ಓರ್ವ ಕಲಾವಿದರನ್ನು ಹೊಂದಿರಬೇಕು. ಸಂಗೀತ ತಂಡದಲ್ಲಿ ಮೂರು ಜನ ಮಹಿಳಾ ಕಲಾವಿದರು ಇರಬೇಕು. ಈ ಪೈಕಿ ಓರ್ವರು ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು.

Also Read  ಐ.ಟಿ.ಐ ಮಹಿಳಾ ಸಂಸ್ಥೆಯಲ್ಲಿ ಖಾಲಿ ಇರುವ ಉದ್ಯೋಗಗಳಿಗೆ ಅರ್ಜಿ ಆಹ್ವಾನ

ತಂಡದ ಎಲ್ಲಾ ಕಲಾವಿದರು ಬ್ಯಾಂಕ್ ಖಾತೆ ಹಾಗೂ ಪಾನ್‍ಕಾರ್ಡ್ ಹೊಂದಿರಬೇಕು. ಅರ್ಜಿಯೊಂದಿಗೆ ಕಲಾವಿದರ ಭಾವಚಿತ್ರ, ಆಧಾರ್‍ಕಾರ್ಡ್, ಬ್ಯಾಂಕ್ ಖಾತೆ, ಪಾನ್ ಕಾರ್ಡ್ ಝೆರಾಕ್ಸ್ ಪ್ರತಿಯನ್ನು ಲಗತ್ತಿಸುವುದು ಕಡ್ಡಾಯವಾಗಿದೆ. ತಂಡವನ್ನು ಜಿಲ್ಲಾಮಟ್ಟದ ಆಯ್ಕೆ ಸಮಿತಿಯ ಮೂಲಕ ಆಯ್ಕೆ ಮಾಡಲಾಗುವುದು. ತಮ್ಮ ಪ್ರದರ್ಶನದ ಸಾಮಥ್ರ್ಯದ ಆಧಾರದ ಮೇಲೆ ಸಮಿತಿ ಆಯ್ಕೆ ಮಾಡುತ್ತದೆ. ಆಯ್ಕೆಯಾದ ತಂಡಗಳಿಗೆ ವಿಭಾಗ ಮಟ್ಟದಲ್ಲಿ ತರಬೇತಿ ನೀಡಲಾಗುವುದು.

ಅರ್ಜಿಯನ್ನು ಜೂನ್ 3 ರಂದು ಅಪರಾಹ್ನ 3 ಗಂಟೆಯೊಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ತಲುಪುವಂತೆ ಅರ್ಜಿ ಸಲ್ಲಿಸಬೇಕು. ನಿಗದಿತ ಅರ್ಜಿ ನಮೂನೆಯನ್ನು ಉಚಿತವಾಗಿ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಜಿಲ್ಲಾ ವಾರ್ತಾಧಿಕಾರಿಗಳು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮಂಗಳೂರು ಈ ವಿಳಾಸಕ್ಕೆ ಸಲ್ಲಿಸಬೇಕು.ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ; 0824-2424254 ಸಂಪರ್ಕಿಸಬಹುದು.

Also Read  ಮಂಗಳೂರು: ಗೃಹರಕ್ಷಕರ ಸೇವೆ ಶ್ಲಾಘನೀಯ ➤ ಶ್ರೀ ಸಂತೋಷ್ ಪಾಟೀಲ್

error: Content is protected !!
Scroll to Top