(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.29.ಕರ್ನಾಟಕ ರಾಜ್ಯ ಚುನಾವಣಾ ಆಯೋಗವು 63 ನಗರ ಸ್ಥಳೀಯ ಸಂಸ್ಥೆಗಳಿಗೆ ಸಾರ್ವತ್ರಿಕ ಚುನಾವಣೆಯನ್ನು ಹಾಗೂ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲಾಗುತ್ತಿದೆ.
ಜಿಲ್ಲೆಯ ಮುಲ್ಕಿ, ಮೂಡಬಿದ್ರೆ, ಹಾಗೂ ಸುಳ್ಯ ಪ್ರದೇಶ ವ್ಯಾಪ್ತಿಯಲ್ಲಿ ಹಾಗೂ ಪುತ್ತೂರು ಹಾಗೂ ಮಂಗಳೂರು ತಾಲೂಕು ವ್ಯಾಪ್ತಿಯ ಗ್ರಾಮಪಂಚಾಯತಿಗಳಲ್ಲಿ ಚುನಾವಣೆ ದಿನಾಂಕ 29ರಂದು ನಡೆಯುತ್ತಿದ್ದು, ಈ ಚುನಾವಣಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಎಲ್ಲ ಸಾರ್ವಜನಿಕ ಉದ್ದಿಮೆಗಳು, ವ್ಯವಹಾರಿಕ ಸಂಸ್ಥೆಗಳು, ಖಾಸಗಿ ಕಂಪೆನಿಗಳು ಮತ್ತು ಇನ್ನಿತರೆ ಸಂಸ್ಥೆಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕಾರ್ಯ ನಿರ್ವಹಿಸುತ್ತಿರುವ ನೌಕರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ವೇತನ ಸಹಿತ ರಜೆ ನೀಡಲು ಆದೇಶಿಸಿದೆ.