ಕರ್ನಾಟಕ ಕರಾವಳಿ ಮೀನುಗಾರಿಕಾ ಇಲಾಖೆಯಿಂದ ಮೀನುಗಾರಿಕೆ ಮಾಡದಂತೆ ನಿಷೇಧಾಜ್ಞೆ ಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.29.ಕರ್ನಾಟಕ ಕರಾವಳಿ ಮೀನುಗಾರಿಕೆ (ನಿಯಂತ್ರಣ) ಕಾಯ್ದೆ, 1986 ಅನ್ವಯ ಕರ್ನಾಟಕ ಸರ್ಕಾರವು ಅಧಿಸೂಚನೆ ಸಂಖ್ಯೆ: ಪಸಂಮೀ 63 ಮೀಇಯೋ 2014, ದಿನಾಂಕ: 13-05-2015 ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಕರ್ನಾಟಕದ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು / ಸಾಧನಗಳನ್ನು ಉಪಯೋಗಿಸಿ ಎಲ್ಲಾ ಯಾಂತ್ರೀಕೃತ ದೋಣಿಗಳ ಮುಖಾಂತರ ಹಾಗೂ 10 ಅಶ್ವಶಕ್ತಿ ಸಾಮಥ್ರ್ಯಕ್ಕಿಂತ ಮೇಲ್ಪಟ್ಟ ಇನ್‍ಬೋರ್ಡ್ ಅಥವಾ ಔಟ್‍ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮುಖಾಂತರ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು ಜೂನ್ 1 ರಿಂದ ಜುಲೈ 31 ರವರೆಗೆ (ಉಭಯ ದಿನಗಳು ಸೇರಿ) ಒಟ್ಟು 61 ದಿನಗಳು ನಿಷೇಧಿಸಿ ಆದೇಶ ಹೊರಡಿಸಲಾಗಿದೆ.

Also Read    ಪರಿಶಿಷ್ಟ ವರ್ಗದ ಕಲ್ಯಾಣ ಇಲಾಖಾವತಿಯಿಂದ ಕಾನೂನು ಪದವಿ ಕೋರ್ಸುಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿಯೇ 10 ಅಶ್ವಶಕ್ತಿಯವರೆಗಿನ ಸಾಮಥ್ರ್ಯದ ಮೋಟಾರೀಕೃತ ದೋಣಿ ಹಾಗೂ ಸಾಂಪ್ರದಾಯಿಕ / ನಾಡದೋಣಿಗಳು ಕರಾವಳಿ ಮೀನುಗಾರಿಕೆಯನ್ನು ಕೈಗೊಳ್ಳಲು ಅನುಮತಿ ನೀಡಲಾಗಿದೆ..ಮೀನುಗಾರಿಕೆ ನಿಷೇಧಿಸಿದ ಸರ್ಕಾರದ ಆದೇಶವನ್ನು ಉಲ್ಲಂಘಿಸುವ ಮೀನುಗಾರಿಕಾ ದೋಣಿಗಳು ಮತ್ತು ಮೀನುಗಾರರು ಕರ್ನಾಟಕ ಕಡಲ ಮೀನುಗಾರಿಕೆ ಕಾಯ್ದೆ-1986ರಲ್ಲಿ ವಿಧಿಸಲಾಗಿರುವ ದಂಡನೆಗಳಿಗೆ ಹೊಣೆಯಾಗುವುದಲ್ಲದೇ ಒಂದು ವರ್ಷದ ಅವಧಿಗೆ ಡೀಸೆಲ್ ಮೇಲಿನ ಸಹಾಯಧನ ಪಡೆಯಲು ಅನರ್ಹರಾಗುತ್ತಾರೆ. ಕರಾವಳಿ ಪ್ರದೇಶದ ಎಲ್ಲಾ ಮೀನುಗಾರರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಹೊರಡಿಸಿರುವುದರಿಂದ ಎಲ್ಲಾ ಮೀನುಗಾರರು ಈ ಆದೇಶವನ್ನು ಪಾಲಿಸಿ ಸರ್ಕಾರದೊಂದಿಗೆ ಸಹಕರಿಸಬೇಕು ಎಂದು ಮೀನುಗಾರಿಕೆ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.

error: Content is protected !!
Scroll to Top