ಸಾಗರ: ಖಾಸಗಿ ಬಸ್ – ಆಟೋ ರಿಕ್ಷಾ ಢಿಕ್ಕಿ ► ಐವರು ಮೃತ್ಯು, ಓರ್ವ ಗಂಭೀರ

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಆ.05. ಖಾಸಗಿ ಬಸ್ ಹಾಗೂ ಆಟೊ ನಡುವೆ ಢಿಕ್ಕಿ ಸಂಭವಿಸಿ ಆಟೊದಲ್ಲಿದ್ದ ಐದು ಮಂದಿ ಪ್ರಯಾಣಿಕರು ಸ್ಥಳದಲ್ಲಿಯೇ ಮೃತಪಟ್ಟು, ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 206ರ ಸಾಗರ ತಾಲೂಕಿನ ಆನಂದಪುರ ಸಮೀಪದ ಆಚಾಪುರ ಎಂಬಲ್ಲಿ ಶನಿವಾರದಂದು ನಡೆದಿದೆ.

ಮೃತಪಟ್ಟವರು ಆಟೊದಲ್ಲಿದ್ದ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಭುವನಹಳ್ಳಿ ತಾವರೆಕೆರೆ ನಿವಾಸಿ ತಿಪ್ಪೇಸ್ವಾಮಿ, ಕುಮಾರ, ರಾಮು, ಪುಟ್ಟರಾಜು ಹಾಗೂ ಶಿವು ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಇನ್ನೋರ್ವನ ಸ್ಥಿತಿ ಚಿಂತಾಜನಕವಾಗಿದ್ದು, ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರು ಶುಕ್ರವಾರದಂದು ಸಿಗಂಧೂರು ಚೌಡೇಶ್ವರಿ ದೇವಿಯ ದರ್ಶನಕ್ಕೆ ಆಗಮಿಸಿ, ದರ್ಶನ ಪಡೆದು ಸಾಗರದಲ್ಲಿ ತಂಗಿದ್ದರು. ಶನಿವಾರ ತಮ್ಮ ಊರಿಗೆ ಹಿಂದಿರುಗುತ್ತಿದ್ದ ವೇಳೆ ಶಿವಮೊಗ್ಗದಿಂದ ಸಾಗರ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಢಿಕ್ಕಿ ಹೊಡೆದಿದೆ. ಅಪಘಾತದಿಂದ ಆಟೊ ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಸಾಗರ ಗ್ರಾಮಾಂತರ ವೃತ್ತ ನಿರೀಕ್ಷಕ ಮಂಜುನಾಥ್‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

error: Content is protected !!
Scroll to Top