ಮಂಗಳೂರು ಮಹಾನಗರ ಪಾಲಿಕೆ, ವ್ಯಾಪ್ತಿಯಲ್ಲಿ ಬರುವ ಸಾರ್ವಜನಿಕರಿಗೆ ರೇಷನಿಂಗ್ ಪದ್ಧತಿ ಜಾರಿ➤ನೀರು ಮಿತವಾಗಿ ಬಳಸಿ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.30.ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರು ಪೂರೈಕೆಯಲ್ಲಿ ಈ ಹಿಂದೆ ಜಾರಿಯಲ್ಲಿದ್ದ ರೇಷನಿಂಗ್ ಪದ್ಧತಿಯನ್ನು ಪರಿಷ್ಕರಿಸಿ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ಕುಡಿಯುವ ನೀರಿನ ಪೂರೈಕೆಯಲ್ಲಿ ಯಾವುದೇ ರೀತಿಯಲ್ಲಿ ವ್ಯತ್ಯಾಸ ಉಂಟಾಗಬಾರದೆಂದುಈ ಯೋಜನೆಯನ್ನು ಜಾರಿಗೆ ತರಲಾಗಿದೆ.

ಮೇ 29 ರಿಂದ 72 ಗಂಟೆಗಳ ಅವಧಿಯಲ್ಲಿ ತುಂಬೆಯಲ್ಲಿ ಪಪಿಂಗ್ ವ್ಯವಸ್ಥೆಯನ್ನು ಸಂಪೂರ್ಣ ಸ್ಥಗಿತಗೊಳಿಸಿ, ತದನಂತರ ಮೇ 31 ರಂದು ಬೆಳಿಗ್ಗೆ 6 ಗಂಟೆಯಿಂದ 4 ದಿನಗಳ ಅವಧಿಯಲ್ಲಿ ಒಟ್ಟು 96 ಗಂಟೆಗಳವರೆಗೆ ಮಂಗಳೂರು ಮಹಾನಮಗರ ಪಾಲಿಕೆ ವ್ಯಾಪ್ತಿಯ ಎಲ್ಲಾ ವಾರ್ಡ್‍ಗಳಿಗೆ ಈ ಹಿಂದೆ ಪೂರೈಕೆ ಮಾಡುತ್ತಿರುವ ರೀತಿಯಲ್ಲಿ ನೀರನ್ನು ಸರಬರಾಜು ಮಾಡಲು ಕ್ರಮವಹಿಸಲಾಗಿದೆ. ಸಾರ್ವಜಿನಕರು ತಮ್ಮ ಮನೆಗಳಲ್ಲಿ ಕೈತೋಟಗಳಿಗೆ, ವಾಹನ ತೊಳೆಯಲು, ಇನ್ನಿತರ ಕೆಲಸಗಳಿಗೆ ಕುಡಿಯುವ ನೀರನ್ನು ಬಳಸಬಾರದು ಹಾಗೂ ನೀರನ್ನು ಪೋಲು ಮಾಡದೆ ಮಿತವಾಗಿ ಬಳಸುವಂತೆ ಮಂಗಳೂರು ಮಹಾನಗರ ಪಾಲಿಕೆ, ಆಯುಕ್ತರ ಪ್ರಕಟಣೆ ತಿಳಿಸಿದೆ.

Also Read  ಹೀರೋ ಅಧಿಕೃತ ಮಾರಾಟ ಸಂಸ್ಥೆ ಕೀರ್ತಿ ಮೋಟಾರ್ ರವರ ಸಹಸಂಸ್ಥೆ ► ಕೀರ್ತಿ ಸರ್ವೀಸಸ್ ಇಂದು (ಜೂ.01) ಕುಕ್ಕೇ ಸುಬ್ರಹ್ಮಣ್ಯದಲ್ಲಿ ಶುಭಾರಂಭ

error: Content is protected !!
Scroll to Top