ಇನ್ಮುಂದೆ ಸರ್ಕಾರಿ ಶಾಲೆಗಳು ಹತ್ತಿರವಿದ್ದಲ್ಲಿ ಆರ್‌ಟಿಇ ಕಾಯ್ದೆಯಡಿ ಖಾಸಗಿ ಶಾಲೆಗಳಿಗೆ ಪ್ರವೇಶವಿಲ್ಲ..!! ➤ ಆಂಗ್ಲ ಮಾಧ್ಯಮ ಶಾಲೆಗಳಲ್ಲಿನ ಉಚಿತ ಶಿಕ್ಷಣಕ್ಕೆ ಹೈಕೋರ್ಟ್ ಬ್ರೇಕ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.01. ಖಾಸಗಿ ಶಾಲೆಗಳಿಗೆ ನೀಡುವ ಹಣವನ್ನು ಸರಕಾರಿ ಶಾಲೆಗಳಿಗೆ ನೀಡಿದರೆ ಗುಣಮಟ್ಟದ ಶಿಕ್ಷಣ ಹಾಗೂ ಮೂಲಸೌಕರ್ಯವನ್ನು ನೀಡುವ ಉದ್ದೇಶದಿಂದ ರಾಜ್ಯ ಸರಕಾರವು ಪ್ರಸಕ್ತ ವರ್ಷದಿಂದ ಒಂದು ಸಾವಿರ ಆಂಗ್ಲ ಮಾಧ್ಯಮ ಶಾಲೆಗಳನ್ನು ಪ್ರಾರಂಭಿಸಿ ಶಿಕ್ಷಣ ಹಕ್ಕು ಕಾಯ್ದೆ(ಆರ್‌ಟಿಇ)ಗೆ ತಂದಿರುವ ತಿದ್ದುಪಡಿ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ.

ಸರಕಾರಿ ಶಾಲೆಗಳನ್ನು ಉಳಿಸುವುದಕ್ಕಾಗಿ ರಾಜ್ಯ ಸರ್ಕಾರವು 2019ರ ಜನವರಿ 30ರಂದು ಆರ್‌ಟಿಇ ಕಾಯ್ದೆಗೆ ತಿದ್ದುಪಡಿ ತಂದು ಆರ್‌ಟಿಇ ಅಡಿ ಪ್ರವೇಶ ಬಯಸುವವರ ಒಂದು ಕಿಮೀ ವ್ಯಾಪ್ತಿಯಲ್ಲಿ ಸರಕಾರಿ ಅಥವಾ ಅನುದಾನಿತ ಶಾಲೆಗಳಿದ್ದರೆ ಅಂತಹ ಮಕ್ಕಳಿಗೆ ಖಾಸಗಿ ಶಾಲೆಗಳಿಗೆ ಪ್ರವೇಶಕ್ಕೆ ಅವಕಾಶವಿಲ್ಲ ಎಂದು ಆದೇಶ ಹೊರಡಿಸಿತ್ತು. ಸರಕಾರದ ಈ ಆದೇಶವನ್ನು ಶಿಕ್ಷಣ ಹಕ್ಕುಗಳ ಟ್ರಸ್ಟ್ ಹಾಗೂ ಪೋಷಕರ ಸಂಘಗಳು ವಿರೋಧ ವ್ಯಕ್ತಪಡಿಸಿ, ರಾಜ್ಯ ಸರಕಾರ ಜಾರಿಗೆ ತಂದಿರುವ ಆರ್‌ಟಿಇ ತಿದ್ದುಪಡಿ ಕಾಯ್ದೆಯನ್ನು ರದ್ದುಗೊಳಿಸಬೇಕೆಂದು ಹೈಕೋರ್ಟ್ ಮೆಟ್ಟಿಲೇರಿದ್ದವು.

ಶಿಕ್ಷಣ ಹಕ್ಕುಗಳ ಟ್ರಸ್ಟ್ ಹಾಗೂ ಪೋಷಕರ ಸಂಘ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ವಿಚಾರಣೆ ಪೂರ್ಣಗೊಳಿಸಿ ಆದೇಶ ಕಾಯ್ದಿರಿಸಿದ್ದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಲ್. ನಾರಾಯಣ ಸ್ವಾಮಿ ಮತ್ತು ನ್ಯಾಯಮೂರ್ತಿ ಪಿ.ಎಸ್. ದಿನೇಶ್‌ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠವು ಸರಕಾರಿ ಹಾಗೂ ಅನುದಾನಿತ ಶಾಲೆಗಳು ಒಂದು ಕಿ.ಮೀ. ವ್ಯಾಪ್ತಿಯಲ್ಲಿದ್ದರೆ ಅಂತಹ ಕಡೆಗೆ ಶಿಕ್ಷಣ ಹಕ್ಕು ಕಾಯ್ದೆ(ಆರ್‌ಟಿಇ)ಯಡಿ ಖಾಸಗಿ ಶಾಲೆಗಳಿಗೆ ಉಚಿತ ಪ್ರವೇಶವಿಲ್ಲ ಎಂದು ಆದೇಶ ಹೊರಡಿಸಿದ್ದು, ರಾಜ್ಯ ಸಕಾರದ ಆದೇಶವನ್ನು ಎತ್ತಿ ಹಿಡಿದಿದೆ.

error: Content is protected !!

Join the Group

Join WhatsApp Group