ಮರಳು ದಿಬ್ಬ ತೆರವು ಹಾಗೂ ಮರಳು ಸಾಗಾಟ ಕಂಡು ಬಂದಲ್ಲಿ ಸೂಕ್ತ ಕಾನೂನು ಕ್ರಮ➤ ಜಿಲ್ಲಾಡಳಿತ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.1.ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿ ನಿಯಂತ್ರಣ ವಲಯದಲ್ಲಿ (CRZ) 2018-19 ನೇ ಸಾಲಿನಲ್ಲಿ ಗುರುತಿಸಿರುವ ಮರಳು ದಿಬ್ಬಗಳನ್ನು ತೆರವುಗೊಳಿಸಲು ಸಾಂಪ್ರದಾಯಿಕವಾಗಿ ಮರಳು ತೆಗಯುವವರಿಗೆ ಅವಕಾಶ ನೀಡಲಾಗಿರುತ್ತದೆ.

ಅದರಂತೆ ಜಿಲ್ಲೆಯಲ್ಲಿ ನಡೆಯುತ್ತಿರುವ ಸರ್ಕಾರಿ ಹಾಗೂ ಇತರೆ ಕಾಮಗಾರಿಗಳಿಗೆ ಮರಳನ್ನು ಪರವಾನಿಗೆಯೊಂದಿಗೆ ಪೂರೈಸಲಾಗುತ್ತಿದೆ.ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಗಾಲ ಪ್ರಾರಂಭವಾಗಲಿದ್ದು, ಮೀನುಗಳ ಸಂತಾನೋತ್ಪತ್ತಿ ಕ್ರಿಯೆ ನಡೆಯುತ್ತದೆ. ಈ ಅವಧಿಯಲ್ಲಿ ಮರಳು ದಿಬ್ಬಗಳನ್ನು ತೆರವುಗೊಳಿಸುವುದರಿಂದ ಮೀನುಗಳ ಸಂತಾನೋತ್ಪತ್ತಿಗೆ ಅಡಚಣೆ ಉಂಟಾಗುತ್ತದೆ.

ಆದ್ದರಿಂದ ದಿನಾಂಕ:01-06-2019 ರಿಂದ 31-08-2019 ರವರೆಗೆ CRZ ಪ್ರದೇಶದಲ್ಲಿ ಮರಳು ದಿಬ್ಬಗಳನ್ನು ತೆರವುಗೊಳಿಸಿ ಮರಳು ಸಾಗಾಟ ಮಾಡುವುದನ್ನು ನಿಷೇಧಿಸಿದೆ ಹಾಗೂ ನದಿಯಲ್ಲಿ ಮರಳು ದಿಬ್ಬಗಳನ್ನು ತೆರವುಗೊಳಿಸಲು ಬಳಸುವ ದೋಣಿಗಳನ್ನು ನದಿ ಮತ್ತು ನದಿಯ ದಡದಿಂದ ಮೇಲೆ ಇಡತಕ್ಕದ್ದು.ಅದರ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮರಳು ದಿಬ್ಬವನ್ನು ತೆರವುಗೊಳಿಸುವುದು ಕಂಡು ಬಂದಲ್ಲಿ ಸೂಕ್ತವಾದ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದು ಜಿಲ್ಲಾಡಳಿತವು ಆದೇಶಿಸಿದೆ ಎಂದು ಉಪನಿರ್ದೇಶಕರು(ಪ್ರಭಾರ), ಗಣಿ ಮತ್ತು ಭೂವಿಜ್ಞಾನ ಇಲಾಖೆ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

error: Content is protected !!
Scroll to Top