ಗೃಹ ಸಚಿವರಾಗಿ ಅಧಿಕಾರದ ಚುಕ್ಕಾಣಿ ಹಿಡಿದ ಅಮಿತ್ ಶಾ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಜೂನ್.1. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ 2ನೇ ಬಾರಿ ಕೇಂದ್ರ ಸರ್ಕಾರದ ಆಡಳಿತ ಆವಧಿಯಲ್ಲಿ ಅಮಿತ್ ಶಾ ಮೊದಲ ಬಾರಿಗೆ ಕ್ಯಾಬಿನೆಟ್ ದರ್ಜೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಎರಡು ದಿನಗಳ ನಂತರ ಅಂದರೆ ಶನಿವಾರ ಗೃಹ ಸಚಿವರಾಗಿ ಅಧಿಕಾರವಹಿಸಿಕೊಂಡು ಕಾರ್ಯನಿರ್ವಹಿಸಲು ಆರಂಭಿಸಿದ್ದಾರೆ.

54ವರ್ಷವಯಸ್ಸಿನ ಅಮಿತ್ ಶಾ ಬಿಳಿ ಬಣ್ಣದ ಕುರ್ತಾ ಮೇಲೆ ತಿಳಿ ನೀಲಿ ಬಣ್ಣದ ಜಾಕೆಟ್ ಧರಿಸಿದ್ದರು. ಇಂದು ಸಂಸತ್ ನ  ಉತ್ತರ ಬ್ಲಾಕ್ ನಲ್ಲಿರುವ ಕೊಠಡಿಗೆ ತೆರಳಿದ್ದ ಅಮಿತ್ ಶಾ ಅವರನ್ನು ಕೇಂದ್ರ ಗೃಹ ಖಾತೆಯ ಕಾರ್ಯದರ್ಶಿ ರಾಜೀವ್ ಗೌಬಾ ಹಾಗೂ ಇತರ ಅಧಿಕಾರಿಗಳು ಸ್ವಾಗತಿಸಿ ಬರಮಾಡಿಕೊಂಡಿದ್ದರು.ರಾಜ್ ನಾಥ್ ಸಿಂಗ್ ಅವರ ಕೈಯಲ್ಲಿದ್ದ ಗೃಹ ಸಚಿವಾಲಯದ ಅಧಿಕಾರ ಇದೀಗ ಅಮಿತ್ ಶಾ ಅವರಿಗೆ ಹಸ್ತಾಂತರವಾಗಿದೆ.

Also Read  ಗೃಹಲಕ್ಷ್ಮೀ ಯೋಜನೆಗೆ ಸರಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ- ಪ್ರತೀ ಗ್ರಾಮಕ್ಕೆ ಪ್ರಜಾಪ್ರತಿನಿಧಿಗಳ ನೇಮಕ

ಪ್ರಸ್ತುತ ಕ್ಯಾಬಿನೆಟ್ ನಲ್ಲಿ ರಾಜ್ ನಾಥ್ ಸಿಂಗ್ ಗೃಹ ಸಚಿವಾಲಯದ ಅಧಿಕಾರ ಅಮಿತ್ ಶಾ ಅವರಿಗೆ ಹಸ್ತಾಂತರಿಸಿ ಈಗ ರಕ್ಷಣಾ ಸಚಿವರಾಗಿ ತಮ್ಮ ಕರ್ತವ್ಯನಿರ್ವಹಿಸುತಿದ್ದಾರೆ. ನೂತನ ಗೃಹ ಸಚಿವರಾಗಿ ಅಧಿಕಾರ ವಹಿಸಿಕೊಂಡಿರುವ ಅಮಿತ್ ಶಾ ಅವರು ಹಲವಾರು ಕಠಿಣ ಹಾಗೂ ಹೊಸ ಬದಲಾವಣೆಯನ್ನು ನೀಡಲಿದ್ದಾರೆ ಎಂದು ವರದಿ ವಿಶ್ಲೇಷಿಸಿದೆ.

error: Content is protected !!
Scroll to Top