ಒಳಚರಂಡಿ ಹಾಗೂ ನಿರಂತರ ನೀರು ಸರಬರಾಜು ಯೋಜನೆಯ ವಾರ್ಡ್ ಮಟ್ಟದ ಸಾರ್ವಜನಿಕ ಸಮಾಲೋಚನಾ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.3.ಕರ್ನಾಟಕ ಸರ್ಕಾರವು ಎಡಿಬಿ ನೆರವಿನೊಂದಿಗೆ ಮಂಗಳೂರು ನಗರಕ್ಕೆ ಕ್ವಿಮಿಪ್ ಟ್ರಾಂಚ್-2 ರಡಿಯಲ್ಲಿ ಒಳಚರಂಡಿ ಹಾಗೂ ನಿರಂತರ ನೀರು ಸರಬರಾಜು ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು ಸಾರ್ವಜನಿಕರಿಗೆ ಮಾಹಿತಿ ನೀಡಲು ಸಾರ್ವಜನಿಕ ಸಮಾಲೋಚನಾ ಸಭೆಯನ್ನು ಕರೆಯಲಾಗಿದೆ.

ಇಂದು  ಅಪರಾಹ್ನ 4 ಗಂಟೆಗೆ ವಾರ್ಡ್ ನಂ. 18 ರಲ್ಲಿ ವಾರ್ಡ್ ಮಟ್ಟದ ಸಾರ್ವಜನಿಕ ಸಮಾಲೋಚನಾ ಸಭೆಯನ್ನು ಕಾವೂರು ಮಾರ್ಕೆಟ್ ಬಳಿ ಕೆಯುಐಡಿಎಫ್‍ಸಿ ಹಾಗೂ ಮಂಗಳೂರು ಮಹಾನಗರಪಾಲಿಕೆ ಸಹಯೋಗದಿಂದ ಆಯೋಜಿಸಲಾಗಿದೆ. ಎಂದು ಮಂಗಳೂರು ಮಹಾನಗರಪಾಲಿಕೆ ಆಯುಕ್ತರ ಪ್ರಕಟಣೆ ತಿಳಿಸಿದೆ.

Also Read   ಬಂಟ್ವಾಳ: ಉಚಿತವಾಗಿ ನೀರು ಒದಗಿಸಿ ಮಾನವೀಯತೆ ಮೆರೆದ ಕೃಷಿಕ

error: Content is protected !!
Scroll to Top