(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.4.ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ(ಮಾನಸಿಕ ವಿಭಾಗ), ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸರಕಾರಿ ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಮಂಗಳೂರು ಇವರ ಸಹಯೋಗದೊಂದಿಗೆ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಜೂನ್ 6 ರಂದು ಪೂರ್ವಾಹ್ನ 11 ಗಂಟೆಗೆ ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜು ಆಡಿಟೋರಿಯಂ ಇಲ್ಲಿ ವಿಶ್ವ ಚಿತ್ತವಿಕಲತೆ ದಿನ – 2019 ಕಾರ್ಯಕ್ರಮ ನಡೆಯಲಿದೆ.ಕಾರ್ಯಕ್ರಮವನ್ನು ಮಿಲಾಗ್ರಿಸ್ ಸಮೂಹ ಶಿಕ್ಷಣ ಸಂಸ್ಥೆಯ ನಿದೇರ್ಶಕರಾದ ಫಾ.ಮೈಖಲ್ ಸಾಂತುಮೆಯರ್ ಉದ್ಘಾಟಿಸಲಿದ್ದಾರೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ರಾಮಕೃಷ್ಣ ರಾವ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.