(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.4.ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ದಕ್ಷಿಣ ಕನ್ನಡ ವಿಭಾಗ ಮಂಗಳೂರು ಇವರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಮತ್ತು ಉಪವಿಭಾಗ ಕಚೇರಿಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ 7 ಸಂಖ್ಯೆ ಕಂಪ್ಯೂಟರ್ ಆಪರೇಟರ್ ಹಾಗೂ 7 ಸಂಖ್ಯೆ ಗ್ರೂಪ್-ಡಿ ಸಿಬ್ಬಂದಿಯನ್ನು 2019-20 ನೇ ಸಾಲಿಗೆ 12 ತಿಂಗಳ ಅವಧಿಗೆ ಹೊರಗುತ್ತಿಗೆ ಪಡೆಯುವ ಸಲುವಾಗಿ ಸೂಕ್ತ ಸೇವಾ ಸರಬರಾಜುದಾರರು (ಮ್ಯಾನ್ ಪವರ್ ಏಜೆನ್ಸಿ) ಯವರಿಂದ ಇ-ಪ್ರೊಕ್ಯೂರ್ಮೆಂಟ್ ಪೋರ್ಟಲ್ ಏಕ ಲಕೋಟೆ ಪದ್ದತಿಯಲ್ಲಿ ಟೆಂಡರ್ ಆಹ್ವಾನಿಸಲಾಗಿದೆ.
ಕರಾರು ನಿಯಮಗಳು ಹಾಗೂ ಇನ್ನಿತರ ವಿವರಗಳನ್ನು ಇ-ಪ್ರೊಕ್ಯೂರ್ಮೆಂಟ್ ಪೋರ್ಟಲ್ htto://eproc.karnataka.gov.in ನಲ್ಲಿ ಪಡೆಯಬಹುದು. ಟೆಂಡರ್ ಫಾರಂಗಳನ್ನು ಸಲ್ಲಿಸಲು ಕೊನೆಯ ದಿನ ಜೂನ್ 11 ಹಾಗೂ ಟೆಂಡರ್ ಗಳನ್ನು ತೆರೆಯುವ ದಿನ ಜೂನ್ 12 ಆಗಿದೆ.ಹೆಚ್ಚಿನ ಮಾಹಿತಿಗಾಗಿ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ದಕ್ಷಿಣ ಕನ್ನಡ ವಿಭಾಗ ಮಂಗಳೂರು ಇಲ್ಲಿ ಕಚೇರಿ ಸಮಯದಲ್ಲಿ ಪಡೆಯಬಹುದು ಎಂದು ಕಾರ್ಯನಿರ್ವಾಹಕ ಇಂಜಿನಿಯರ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ದಕ್ಷಿಣ ಕನ್ನಡ ವಿಭಾಗ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.