(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ಜೂನ್.4.ನೂಜಿ ರೆಂಜಿಲಾಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಪ್ರಾರಂಭೋತ್ಸವ, ಪಠ್ಯ ಪುಸ್ತಕ ವಿತರಣೆ ಹಾಗೂ ವಿಶೇಷ ದಾಖಲಾತಿ ಆಂದೋಲನ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.
ಗ್ರಾಮ ಪಂಚಾಯತ್ ಸದಸ್ಯೆ ರಜಿತಾ ಪದ್ಮನಾಭ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಿಸಿದರು. ಸಭೆಯ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ. ಅಧ್ಯಕ್ಷರು ವಹಿಸಿದ್ದರು. ವಿಶೇಷ ದಾಖಲಾತಿ ಆಂದೋಲನದಲ್ಲಿ ಶಾಲೆಗೆ ದಾಖಲಾಗಲು ಅರ್ಹರಿರುವ ಮಗುವಿನ ಮನೆಗೆ ಗ್ರಾ.ಪಂ. ಸದಸ್ಯೆ, ಶಿಕ್ಷಕರು, ಎಸ್.ಡಿ.ಎಂ.ಸಿ. ಸದಸ್ಯರು ಹಾಗೂ ವಿದ್ಯಾರ್ಥಿಗಳು ತೆರಳಿ ಮಗುವನ್ನು ಶಾಲೆಗೆ ದಾಖಲು ಮಾಡಿಕೊಳ್ಳಲಾಯಿತು. ಶಾಲಾ ಮುಖ್ಯ ಶಿಕ್ಷಕಿ ಎಂ.ಎಸ್.ತಿರುಮಲೇಶ್ವರಿ ಸ್ವಾಗತಿಸಿ, ವಂದಿಸಿದರು.
Also Read 70 ವರ್ಷ ಮೇಲ್ಪಟ್ಟ ನಾಗರೀಕರಿಗೆ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ - ಕೇಂದ್ರ ಸರ್ಕಾರದಿಂದ ಮಹತ್ವದ ಘೋಷಣೆ